ಡಿವಿಜಿ ಸುದ್ದಿ, ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮೇ. 3 ವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿದ್ದಾರೆ. ಅವರ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ. ರಾಜ್ಯದಲ್ಲಿ ಇಂದಿನಿಂದ ಮತ್ತಷ್ಟು ಕಠಿಣಗೊಳ್ಳಲಿದ್ದು, ಜನರು ಸಹಕಾರ ನೀಡಬೇಕು ಎಂದು ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 3ರ ತನಕ ಲಾಕ್‍ಡೌನ್ ವಿಸ್ತರಣೆಯ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ. ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನ ನಾವು ಪಾಲಿಸುತ್ತೇವೆ ಎಂದು ತಿಳಿಸಿದರು.
ಏಪ್ರಿಲ್ 20ರ ತನಕ ಹಾಟ್ ಸ್ಪಾಟ್ ಪ್ರದೇಶಗಲ್ಲಿ ಇನ್ನಷ್ಟು ಕಠಿಣಗೊಳಿಸುತ್ತೇವೆ. ನಾಳೆ ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಲಿದೆ. ಮಾರ್ಗ ಸೂಚಿ ಬಂದ ಬಳಿಕ ರಾಜ್ಯ ಸರ್ಕಾರ ಮತ್ತಷ್ಟು ನಿರ್ಣಯಗಳನ್ನು ತೆಗೆದುಕೊಳ್ಳುತ್ತೇವೆ. ಈ ನಿರ್ಧಾರಕ್ಕೆ ಜನ ಸಹಕರಿಸಬೇಕು ಎಂದು ಹೇಳಿದರು.