Connect with us

Dvgsuddi Kannada | online news portal | Kannada news online

ಏಪ್ರಿಲ್ 30 ವರೆಗೆ ಲಾಕ್ ಡೌನ್ ಮುಂದುವರಿಕೆ : ಸಿಎಂ ಯಡಿಯೂರಪ್ಪ

ಪ್ರಮುಖ ಸುದ್ದಿ

ಏಪ್ರಿಲ್ 30 ವರೆಗೆ ಲಾಕ್ ಡೌನ್ ಮುಂದುವರಿಕೆ : ಸಿಎಂ ಯಡಿಯೂರಪ್ಪ

ಡಿವಿಜಿ ಸುದ್ದಿ, ಬೆಂಗಳೂರು:  ಏಪ್ರಿಲ್ 30 ವರೆಗೆ ಲಾಕ್ ಡೌನ್ ರಾಜ್ಯದಲ್ಲಿ ಮುಂದುವರೆಯಲಿದ್ದು, ಮುಂದಿನ ಮೂರ್ನಾಲ್ಕು ವಾರ ಲಾಕ್ ಡೌನ್ ವಿಭಿನ್ನವಾಗಿರುತ್ತದೆ. ಈ ಬಗ್ಗೆ ಕೇಂದ್ರ ಸರ್ಕಾರ 2 ದಿನದಲ್ಲಿ ಮಾರ್ಗಸೂಚಿ ರಚಿಸಲಿದೆ ಎಂದು ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಜೊತೆ ಶನಿವಾರ ವಿಡಿಯೋ ಸಂವಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ 15 ದಿನಗಳ ಲಾಕ್‌ಡೌನ್‌ ವಿಭಿನ್ನವಾಗಿ ಇರಲಿದೆ. ಆದರೆ ಅದನ್ನು ಪಾಲಿಸುವ ವಿಷಯದಲ್ಲಿ ಯಾವುದೇ ರಾಜಿ ಮಾಡುವುದಿಲ್ಲ ಎಂದರು.

ಆರ್ಥಿಕ ಚಟುವಟಿಕೆಗೆ ಅನುಕೂಲವಾಗುವಂತೆ ಕೆಲವು ವಿನಾಯಿತಿ ನೀಡುವ ಬಗ್ಗೆ ಪ್ರಧಾನಿ ತಿಳಿಸಿದ್ದಾರೆ. ಸರ್ಕಾರಿ ಕಚೇರಿಗಳನ್ನು ಸದ್ಯ ಮುಚ್ಚಲಾಗಿದ್ದು. ಭಾಗಶಃ ಆರಂಭಿಸುವ ಬಗ್ಗೆ ಕೇಂದ್ರ ಸರ್ಕಾರ ಮಾರ್ಗಸೂಚಿಯಲ್ಲಿ ರಚಿಸುವ ಸಾಧ್ಯತೆ ಇದೆ.

ಪ್ರಧಾನ ಮಂತ್ರಿ ನಾಲ್ಕು ಗಂಟೆ ಕಾಲ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ  ಆಯಾ ರಾಜ್ಯಗಳ ಸ್ಥಿತಿಗತಿ ಬಗ್ಗೆ ತಿಳಿದುಕೊಂಡಿದ್ದಾರೆ. ದೇಶದಲ್ಲಿ ಸೋಂಕಿತರ ಸಂಖ್ಯೆ  ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ಲಾಕ್ ಡೌನ್ ಅನಿವಾರ್ಯವಾಗಿದೆ.

ಕೃಷಿಕರಿಗೆ, ಮೀನುಗಾರರಿಗೆ ಲಾಕ್ ಡೌನ್ ವಿನಾಯಿತಿ ನೀಡಲಾಗಿದೆ. ಕೊರೊನಾ ವಿರುದ್ಧ ಅವಿರತ ದುಡಿಯುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ ವಿರುದ್ದ ದೌರ್ಜನ್ಯ ನಡೆದರೆ ಕಠಿಣ ಕ್ರಮ ಜರುಗಿಸಲು ಪ್ರಧಾನಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅಕ್ರಮವಾಗಿ ಅಗತ್ಯ ವಸ್ತುಗಳನ್ನು ಮಾರಾಟ ಮಾಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ ಎಂದರು.

ಕೃಷಿ, ಕೈಗಾರಿಕೆ, ಕಾರ್ಮಿಕರಿಗೆ ಉದ್ಯೋಗಕ್ಕೆ ಅನುಕೂಲ ಕಲ್ಪಿಸುವ ಜತೆಗೆ ಸರ್ಕಾರಿ ಕಚೇರಿಗಳನ್ನು ಭಾಗಶಃ ಆರಂಭಿಸಲು ಅನುಮತಿ ನೀಡಲಾಗುವುದು. ಪ್ರಮುಖವಾಗಿ ಕೊರೊನಾ ಸೋಂಕು ಸಮುದಾಯಕ್ಕೆ ಹರಡದಂತೆ  ಕ್ರಮ ಕೈಗೊಳ್ಳಲು ಪ್ರಧಾನಿ ಸೂಚಿಸಿದ್ದಾರೆ.

2.84 ಲಕ್ಷ ಪಿಪಿಇ ಕಿಟ್ ಹಾಗೂ ಎರಡು ದಿನಕ್ಕೊಮ್ಮೆ 29 ಲಕ್ಷ ಮಾಸ್ಕ್ ಕಳುಹಿಸುವುದಾಗಿ ಭರವಸೆ ನೀಡಿದ್ದಾರೆ. ದೇಶದಾದ್ಯಂತ ಇದುವರೆಗೆ ಕೊರೊನಾ ಸೋಂಕು ಪತ್ತೆಗೆ 220 ಲ್ಯಾಬ್ ಗಳಿದ್ದು ಏಪ್ರಿಲ್ ಅಂತ್ಯಕ್ಕೆ 300 ಲ್ಯಾಬ್ ಆರಂಭಿಸುವ ಭರವಸೆಯನ್ನು ಪ್ರಧಾನಿ ನೀಡಿದ್ದಾರೆ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top