Connect with us

Dvgsuddi Kannada | online news portal | Kannada news online

ಎಲ್ ಪಿಜಿ ಗ್ಯಾಸ್ ಗ್ರಾಹಕರಿಗೆ ಸಿಹಿ ಸುದ್ದಿ;  ಪ್ರತಿ ಸಿಲಿಂಡರ್ ಬೆಲೆ  61 ಇಳಿಕೆ

ಪ್ರಮುಖ ಸುದ್ದಿ

ಎಲ್ ಪಿಜಿ ಗ್ಯಾಸ್ ಗ್ರಾಹಕರಿಗೆ ಸಿಹಿ ಸುದ್ದಿ;  ಪ್ರತಿ ಸಿಲಿಂಡರ್ ಬೆಲೆ  61 ಇಳಿಕೆ

ನವದೆಹಲಿ: ಕೊರೊನಾ ವೈರಸ್‍ನಿಂದಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಜೆಯಾಗಿದೆ. ಇದರ ಲಾಭವನ್ನು ಕಂಪನಿಗಳು ನೇರವಾಗಿ ಗ್ರಾಹಕರಿಗೆ ನೀಡಿದೆ.  ನೈಸರ್ಗಿಕ ಅನಿಲದ ಬೆನ್ನಲ್ಲೇ ಅಡಿಗೆ (ಎಲ್‍ಪಿಜಿ) ಅನಿಲದ ಬೆಲೆ ಕಡಿಮೆ ಮಾಡಲಾಗಿದೆ.

ದೇಶದ ಅತಿದೊಡ್ಡ ಸರ್ಕಾರಿ ತೈಲ ಕಂಪನಿಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್, ರಾಜಧಾನಿಯಲ್ಲಿ ಸಬ್ಸಿಡಿ ರಹಿತ 14.2 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆ 61 ರೂಪಾಯಿ ಕಡಿತಗೊಳಿಸಿದೆ. ಮಾರ್ಚ್ ನಲ್ಲಿ ಒಂದು ಸಿಲೆಂಟರ್ ಬೆಲೆ 805.50 ರೂ. ಇತ್ತು. ಇದೀಗ ಬೆಲೆ ಇಳಿಕೆಯಿಂದ ಸಿಲಿಂಡರ್ 744 ರೂ.ಗೆ ಇಳಿಕೆಯಾಗಿದೆ. ಹೊಸ ಬೆಲೆಯು ಏಪ್ರಿಲ್ 1ರಿಂದ ಜಾರಿಗೆ ಬಂದಿದೆ.

ಮಾರ್ಚ್ 1ರಿಂದ ಸಬ್ಸಿಡಿ ರಹಿತ 14.2 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆಯಲ್ಲಿ 53 ರೂ. ಕಡಿಮೆ ಮಾಡಲಾಗಿತ್ತು. ಇಂದಿನಿಂದ ಮತ್ತೆ 61 ರೂ. ಕಡಿಮೆ ಮಾಡಿರುವುದು ಗ್ರಾಹಕರಿಗೆ ಖುಷಿ ತಂದಿದೆ.ಬೆಂಗಳೂರಿನಲ್ಲಿ ಮಾರ್ಚ್ ವೇಳೆಗೆ ಸಬ್ಸಿಡಿ ರಹಿತ 14.2 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆಯು 809 ರೂ. ಇತ್ತು. ಬೆಲೆ ಇಳಿಯಿಂದಾಗಿ 747 ರೂ.ಗೆ ಲಭ್ಯವಾಗಲಿದೆ.

ಫೆಬ್ರವರಿಯಲ್ಲಿ ಎಲ್‍ಪಿಜಿ ಬೆಲೆ ದಿಢೀರ್ ಹೆಚ್ಚಾದ ನಂತರ ಸರ್ಕಾರ ಗ್ಯಾಸ್ ಸಿಲಿಂಡರ್‌ಗಳ ಮೇಲಿನ ಸಬ್ಸಿಡಿಯನ್ನು ದ್ವಿಗುಣಗೊಳಿಸಿತ್ತು. ರಾಜಧಾನಿ ದೆಹಲಿಯಲ್ಲಿ ಪ್ರತಿ ಸಿಲಿಂಡರ್‍ಗೆ 153.86 ರೂ.ಗಳ ಸಬ್ಸಿಡಿಯನ್ನು 291.48 ರೂ.ಗೆ ಹೆಚ್ಚಿಸಲಾಗಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಹೇಳಿಕೆ ನೀಡಿತ್ತು.

ಇನ್ನು  ಪ್ರಧಾನಿ ಉಜ್ವಲ ಯೋಜನೆ ಅಡಿ ಪ್ರತಿ ಸಿಲಿಂಡರ್‍ಗೆ ಸಬ್ಸಿಡಿಯನ್ನು 174.86 ರೂ.ನಿಂದ 312.48 ರೂ.ಗೆ ಹೆಚ್ಚಿಸಲಾಗಿದೆ.  ವರ್ಷದಲ್ಲಿ 12 ಸಿಲಿಂಡರ್‌ಗಳಿಗೆ ಸಬ್ಸಿಡಿ ನೀಡಲಾಗುತ್ತಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top