ಡಿವಿಜಿ ಸುದ್ದಿ, ಬೆಂಗಳೂರು: ಪಕ್ಷದ ಸಿದ್ಧಾಂತ ಅನುಷ್ಠಾನಕ್ಕೆ ತರಲು ಯಾರೇ ಬಂದರೂ ಸರಿ, ನನಗೆ ಹುದ್ದೆ ಸಿಗಲಿಲ್ಲ ಎಂದು ಬೇಸರವಿಲ್ಲ ಎಂದು ರಾಜಸಭಾ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಮಹಾರಾಷ್ಟ್ರ ಉಸ್ತುವಾರಿಯಿಂದ ಕೈ ಬಿಟ್ಟಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರಜಾಪ್ರಭುತ್ವ ಉಳಿಯಬೇಕಾದರೆ ಎಲ್ಲರೂ ಇರಬೇಕು. ಆ ದಿಕ್ಕಿನಲ್ಲೇ ನಾನು ಮುನ್ನಡೆದಿರುವವನು ನಾನು. ಪಕ್ಷದ ಮಹಾರಾಷ್ಟ್ರ ಉಸ್ತುವಾರಿಯಿಂದ ನನ್ನನ್ನು ಕೈಬಿಟ್ಟಿದ್ದಕ್ಕೆ ಬೇಸರವಿಲ್ಲ. ಎಲ್ಲವೂ ನಮ್ಮ ಕೈಯಲ್ಲಿ ಇರುವುದಿಲ್ಲ. ಎಲ್ಲವೂ ನನಗೆ ಸಿಗಬೇಕೆಂಬ ಆಸೆ ನನಗೆ ಇಲ್ಲ. ಒಂದು ತತ್ವದಾರ್ಶ ಹೊಂದಿದ್ದೇನೆ ಎಂದರು.
ನಾನು ನೆಹರು, ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯಕ್ಕೆ ಬದ್ಧನಾಗಿರುವವನು. ರಾಜ್ಯಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ನಾನು ಬೇಡಿಕೆ ಇಟ್ಟಿಲ್ಲ. ಆ ಸ್ಥಾನದಲ್ಲಿ ಈಗ ಗುಲಾಂ ನಬಿ ಇದ್ದಾರೆ. ಹೈಕಮಾಂಡ್ ನಿಲುವಿಗೆ ನಾನು ತಲೆ ಬಾಗುತ್ತೇನೆ ಎಂದು ಹೇಳಿದರು.



