ಡಿವಿಜಿ ಸುದ್ದಿ, ಮಂಗಳೂರು: ಕ್ವಾರಂಟೈನ್ ನಲ್ಲಿದ್ದ ಗರ್ಭಿಣಿಗೆ ಸೂಕ್ತ ಚಿಕಿತ್ಸೆ ಸಿಗದ ಪರಿಣಾಮ ಹೊಟ್ಟೆಯಲ್ಲೇ ಮಗು ಸಾವನ್ನಪ್ಪಿದೆ ಎಂಬ ಆರೋಪ ವೈದ್ಯರ ವಿರುದ್ಧ ಕೇಳಿಬಂದಿದೆ.
ಮೇ 12ರಂದು ದುಬೈನಿಂದ ಗರ್ಭಿಣಿ ಬಂದಿದ್ದರು. ಮಂಗಳೂರು ವಿಮಾನ ನಿಲ್ದಾಣದಿಂದ ಆಕೆಯನ್ನು ಹೋಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಮರುದಿನ ನಡೆದ ತಪಾಸಣೆಯಲ್ಲಿ ಕೊರೊನಾ ನೆಗೆಟಿವ್ ಬಂದಿತ್ತು. ಆದರೆ, ಗರ್ಭಿಣಿಗೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯರು ನಿರ್ಲಕ್ಷ್ಯ ತೋರಿದ್ದರಿಂದ ಮಗು ಸಾವನ್ನಪ್ಪಿದೆ ಆರೋಪಿಸಲಾಗುತ್ತಿದೆ.
ಗರ್ಭಿಣಿಯ ಆರೋಗ್ಯ ತಪಾಸಣೆ ವಿಚಾರದಲ್ಲಿ ವೈದ್ಯರು ನಿರ್ಲಕ್ಷ್ಯ ವಹಿಸಿದ್ದು, ಮಂಗಳೂರಿನ ಕೆಲ ಖಾಸಗಿ ಆಸ್ಪತ್ರೆ ವೈದ್ಯರು ಕೂಡ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ ತಿಳಿದು ಬಂದಿದೆ. ಕೋವಿಡ್ ನೆಗೆಟಿವ್ ಬಂದರೂ ಚಿಕಿತ್ಸೆ ಸಿಗದೇ ಮಗು ಸಾವನ್ನಪ್ಪಿದೆ. ಈ ಪ್ರಕರಣಕ್ಕೆ ವೈದ್ಯರು ನೇರ ಹೊಣೆ ಎಂದು ಮಹಿಳೆಯ ಕುಟುಂಬಸ್ಥರು ದೂರಿದ್ದಾರೆ.