ಡಿವಿಜಿ ಸುದ್ದಿ, ಮಂಗಳೂರು: ನಗರದ ರೈಲ್ವೆ ನಿಲ್ದಾಣದಲ್ಲಿ ಸೈಯದ್ ಮೊಹಮ್ಮದ್ ಮತ್ತು ಅಶೋಕ ಕೆ.ಎಸ್. ಎಂಬ ಇಬ್ಬರು ವ್ಯಕ್ತಿಗಳಿಂದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಅವರಿಂದ 5.6 ಕೆಜಿಯ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ.
ಕೇರಳದ ಕ್ಯಾಲಿಕಟ್‌ನಿಂದ ಮಂಗಳೂರಿಗೆ ಅಕ್ರಮವಾಗಿ ಗಟ್ಟಿ ಚಿನ್ನ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ತಪಾಸಣೆ ನಡೆಸಿದ ಅಧಿಕಾರಿಗಳು 5.6 ಕೆಜಿ ಚಿನ್ನ ವಶಪಡಿಸಿಕೊಂಡಿದ್ದಾರೆ. ಕರ್ನಾಟಕದ ವಿವಿಧ ಭಾಗಗಳಿಗೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.
ಈ ಇಬ್ಬರ ಜೊತೆ ಚಿನ್ನವನ್ನು ಪಡೆಯಲಿದ್ದ ಮಂಜುನಾಥ್ ಶೇಟ್ ಅಲಿಯಾಸ್ ರೂಪೇಶ್ ಎಂಬಾತನನ್ನು ರೈಲ್ವೆ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಬಂಧಿಸಲಾಗಿದೆ. ಮಂಗಳೂರು, ಉಡುಪಿ, ಮತ್ತು ಶಿವಮೊಗ್ಗದಲ್ಲಿ ಏಕಕಾಲದಲ್ಲಿ ಶೋಧ ನಡೆಸಲಾಗಿತ್ತು.
ಚಿನ್ನ ಜೊತೆ 82 ಲಕ್ಷ ವಶಕ್ಕೆ ಪಡೆಯಲಾಗಿದೆ ಹಾಗೂ ಅಕ್ರಮವಾಗಿ ಚಿನ್ನ ಸಾಗಾಟ ಮಾಡಲು ಬಳಸಲಾಗುತ್ತಿದ್ದ ಎರಡು ಟೊಯೋಟಾ ಎಟಿಯೋಸ್ ಕಾರುಗಳನ್ನು ಕೂಡಾ ವಶಕ್ಕೆ ಪಡೆಯಲಾಗಿದೆ. ಬೆಂಗಳೂರು, ಮಂಗಳೂರು ಮತ್ತು ಶಿವಮೊಗ್ಗದಲ್ಲಿಒಟ್ಟು 40 ಅಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.