ಡಿವಿಜಿ ಸುದ್ದಿ, ಮಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ನಡೆಸ ಪ್ರತಿಭಟನೆಯಲ್ಲಿ ಗೋಲಿಬಾರ್‌ನಲ್ಲಿ ಮೃತಪಟ್ಟವರು ಅಪರಾಧಿಗಳು ಎಂಬ ಸಂಶಯ ಮೂಡಿದ್ದು, ತನಿಖೆ ನಂತರವೇ ಅವರಿಗೆ ಪರಿಹಾರ ಕೊಡುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೃತರು ಅಪರಾಧಿಗಳು ಎಂದು ಸಾಬೀತಾದರೆ ಪರಿಹಾರ ಕೊಡಲು ಸಾಧ್ಯವಿಲ್ಲ. ಸರ್ಕಾರ ಗೋಲಿಬಾರ್‌ನಲ್ಲಿ ಮೃತಪಟ್ಟವರಿಗೆ 10 ಲಕ್ಷ ಪರಿಹಾರ ವಿತರಿಸುವುದಾಗಿ ಹೇಳಿತ್ತು.
ಕಾನೂನು ಸುವ್ಯವಸ್ಥೆ ಕಾಪಾಡಲು ಗಮನ ಕೊಡಿ’ ಎಂದು ಪೊಲೀಸರಿಗೆ ಸೂಚಿಸಿದ್ದೇವೆ. ಮಂಗಳೂರಿನಲ್ಲಿ ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ಪರಿಸ್ಥಿತಿ ನಿರ್ವಹಿಸಲು ಏನು ಮಾಡಬೇಕಿತ್ತೋ ಅದನ್ನು ಮಾಡಿದ್ದಾರೆ. ಅವರಿಗೆ ನಮ್ಮ ಬೆಂಬಲ ಇದೆ. ಇನ್‌ಸ್ಪೆಕ್ಟರ್ ಅಮಾನತು ಮಾಡಬೇಕು ಎಂಬ ಒತ್ತಾಯಗಳು ಬಗ್ಗೆ ಈಗಲೇ ಏನೂ ಹೇಳಲು ಆಗದು. ತನಿಖೆ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.



