ಡಿವಿಜಿ ಸುದ್ದಿ, ಬಳ್ಳಾರಿ: ವಿಜಯನಗರ ಪ್ರತ್ಯೇಕ ಜಿಲ್ಲೆ ಘೋಷಣೆಗೆ ಸಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹೊಸ ಸುಳಿವು ನೀಡಿದರು.
ನಗರದದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಧ್ವಜಾರೋಹಣ ನೆರವೇರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ದಿನ ನಾವೆಲ್ಲರೂ ಅಣ್ಣ, ತಮ್ಮಂದಿರಂತೆ ಒಟ್ಟಿಗೆ ಇದ್ದೇವೆ. ನಮ್ಮಣ್ಣ ಇಲ್ಲೇ ಇದ್ದಾರೆ. ಅಣ್ಣ ಹೇಳಿದಂತೆ ನಾನು ಕೇಳುತ್ತೇನೆ. ಅವರ ಆಶೀರ್ವಾದ ಸದಾ ನಮ್ಮ ಮೇಲಿದೆ.
ಅವರು ಈಗಾಗಲೇ ಭರವಸೆ ನೀಡಿದ್ದಾರೆ ಎಂದು ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಅವರಿಗೆ ಕೈಮುಗಿದು ನಗು ಬೀರಿದರು. ಆ ಮೂಲಕ ಪರೋಕ್ಷವಾಗಿ ಸೋಮಶೇಖರ್ ರೆಡ್ಡಿ ಅವರು ಸಹ ಜಿಲ್ಲೆ ಪ್ರತ್ಯೇಕ ಮಾಡುವ ಕುರಿತು ಒಪ್ಪಿಗೆ ನೀಡಿದ್ದಾರೆ ಎಂದು ಸುಳಿವು ನೀಡಿದರು.



