ಡಿವಿಜಿ ಸುದ್ದಿ, ಶಿವಮೊಗ್ಗ: ಅಯೋಧ್ಯೆಯಲ್ಲಿ ಮಸೀದಿ ತೆರವುಗೊಳಿಸಿ ರಾಮ ಮಂದಿರ ನಿರ್ಮಾಣ ಆಗಬೇಕೆಂಬುದು ಬಹುಸಂಖ್ಯಾತ ಹಿಂದೂಗಳ ಆಶಯವಾಗಿತ್ತು. ಈ ಆಸೆ ಇಂದು ಈಡೇರಿದೆ. ಆದರೆ, ಅದೇ ರೀತಿ ಕಾಶಿ ಹಾಗೂ ಮಥುರಾದಲ್ಲಿನ ಮಸೀದಿ ಸಹ ತೆರವುಗೊಳಸಬೇಕಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗ ನಗರದ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಇಂದು ರಾಮ ಮಂದಿರ ನಿರ್ಮಾಣಕ್ಜೆ ಭೂಮಿ ಪೂಜೆ ನೆರವೇರಿಸಿದ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಅಯೋಧ್ಯೆಯ ರೀತಿಯಲ್ಲಿಯೇ ಕಾಶಿ ಹಾಗೂ ಮಥುರಾದಲ್ಲಿರುವ ಮಸೀದಿಗಳನ್ನು ಕೂಡ ತೆರವುಗೊಳಸಬೇಕಿದೆ ಎಂದರು.
ಕಾಶಿ ಹಾಗೂ ಮಥುರಾದಲ್ಲಿ ದೇವರ ದರ್ಶನಕ್ಕೆ ತೆರಳಿದರೆ ನಾವು ಗುಲಾಮರು ಎಂಬಂತೆ ಭಾಸವಾಗುತ್ತದೆ. ಇದಕ್ಕೆ ಕಾರಣ ದೇವಾಲಯದ ಪಕ್ಕದಲ್ಲಿಯೇ ಮಸೀದಿ ಇದೆ. ಹೀಗಾಗಿ ಅಲ್ಲಿ ಭಕ್ತಿಯಿಂದ ಪೂಜೆ ಸಲ್ಲಿಸಲು ಆಗದ ಪರಿಸ್ಥಿತಿ ಇದೆ.
ಅಲ್ಲಿರುವ ಮಸೀದಿಗಳು ನಮಗೆ ಗುಲಾಮರು ಎಂಬಂತೆ ಬಿಂಬಿಸುತ್ತವೆ. ಅಯೋಧ್ಯೆಯಲ್ಲಿ ಗುಲಾಮಗಿರಿಯ ಸಂಕೇತವಾಗಿದ್ದ ಮಸೀದಿ ತೆರವುಗೊಳಿಸಲಾಗಿದೆ. ಅದೇ ರೀತಿ ಕಾಶಿ ಹಾಗೂ ಮಥುರಾದಲ್ಲಿ ಮಸೀದಿಗಳನ್ನು ತೆರವುಗೊಳಿಸುತ್ತೇವೆ. ಕಾಶಿ ಹಾಗೂ ಮಥುರಾದಲ್ಲಿ ಇಂದಲ್ಲ, ನಾಳೆ ಮಸೀದಿ ತೆರವುಗೊಳಿಸುವ ವಿಶ್ವಾಸವಿದೆ ಎಂದಿದ್ದಾರೆ.



