ಡಿವಿಜಿ ಸುದ್ದಿ, ರಾಯಚೂರು: ಮಹಾರಾಷ್ಟ್ರ ರಾಜ್ಯ ಹೊರತುಪಡಿಸಿ ಉಳಿದ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾ, ತೆಲಂಗಾಣ, ಆಂಧ್ರಪ್ರದೇಶ ಹಾಗೂ ತಮಿಳುನಾಡು ಸರ್ಕಾರಕ್ಕೆ ಪತ್ರ ಬರೆಯಲಾಗಿದ್ದು, ಶೀಘ್ರದಲ್ಲೆ ಅಂತರರಾಜ್ಯ ಬಸ್ ಸೇವೆ ಆರಂಭಿಸಲು ಚಿಂತನೆ ನಡೆದಿದೆ ಎಂದರು.



