ಡಿವಿಜಿ ಸುದ್ದಿ, ಹೊಸಕೋಟೆ: ಶಾಸಕ ಶರತ್ ಬಚ್ಚೇಗೌಡ ಮತ್ತು ಅವರ ಪತ್ನಿ ಪ್ರತಿಭಾ ಶರತ್ ಬಚ್ಚೇಗೌಡರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.
ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆ ಗಂಟಲು ದ್ರವವ ಪರೀಕ್ಷೆಗೆ ಒಳಪಡಿಸಿದ್ದು, ಅದರ ವರದಿ ಬಂದಿದೆ. ನನಗೆ ಹಾಗೂ ನನ್ನ ಪತ್ನಿಗೆ ಸೋಂಕು ಇರುವುದು ದೃಢಪಟ್ಟಿದೆ. ರೋಗದ ಯಾವುದೇ ಲಕ್ಷಣ ಕಾಣಿಸಿಕೊಂಡಿರಲಿಲ್ಲ ಎಂದು ಹೇಳಿದ್ದಾರೆ.
ವೈದ್ಯರ ಸಲಹೆಯಂತೆ ಮನೆಯಲ್ಲಿಯೇ ಕ್ವಾರಂಟೈನ್‌ನಲ್ಲಿದ್ದೇವೆ. ರೋಗನಿರೋಧಕ ಶಕ್ತಿ ಇರುವುದರಿಂದ ಬೇಗ ಗುಣಮುಖರಾಗಿ ಬರುತ್ತೇನೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.



