ಡಿವಿಜಿ ಸುದ್ದಿ, ಬೆಂಗಳೂರು: ಎಂಎಲ್‍ಸಿ ಪುಟ್ಟಣಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಈ ಕುರಿತು ಫೇಸ್‍ಬುಕ್ ನಲ್ಲಿ ಬರೆದುಕೊಂಡಿರುವ ಪುಟ್ಟಣ ಅವರು ನಿಮ್ಮ ಆಶೀರ್ವಾದದಿಂದ ಬೇಗ ಗುಣಮಖನಾಗಿ ಬರುತ್ತೇನೆ ಎಂದು ಬರೆದುಕೊಂಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಜ್ವರ ಇದ್ದುದರಿಂದ, ಕ್ವಾರಂಟೈನ್ ನಲ್ಲಿ ಇದ್ದೆ. ಗುರುವಾರ ಕೋವಿಡ್ ತಪಾಸಣೆಗೆ ಒಳಪಡಿಸಲಾಗಿತ್ತು. ತಪಾಸಣೆಯ ವರದಿ ಪಾಸಿಟಿವ್ ಬಂದಿರುವುದರಿಂದ ಶುಕ್ರವಾರ ಅಂದರೆ ನಿನ್ನೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ದೇವರ ದಯೆ ಹಾಗೂ ನಿಮ್ಮ ಆಶೀರ್ವಾದದಿಂದ ಬೇಗ ಗುಣಮುಖನಾಗಿ ಬರುತ್ತೇನೆ ಎಂದು ನಂಬಿದ್ದೆನೆ. ಎಲ್ಲರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ನೀವು ಮತ್ತು ನಿಮ್ಮ ಕುಟುಂಬದವರು ಸುರಕ್ಷಿತವಾಗಿರಿ ಎಂದು ಮನವಿ ಮಾಡಿಕೊಂಡಿದ್ದಾರೆ.



