ನವದೆಹಲಿ : ಮಹಾರಾಷ್ಟ್ರ ಕೊರೊನಾ ಮಹಾಮಾರಿಗೆ ತತ್ತರಿಸಿ ಹೋಗಿದೆ. ದೇಶದಲ್ಲೇ ಅತಿ ಹೆಚ್ಚು ಕೋವಿಡ್ -19 ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ಒಂದೇ ದಿನ 811 ಹೊಸ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಒಟ್ಟು 7,628 ಪ್ರಕರಣಗಳು ಪತ್ತೆಯಾಗಿವೆ.
ನಿನ್ನೆ ಒಂದೇ ದಿನ 22 ಜನರು ಕೋವಿಡ್ -19ನಿಂದಾಗಿ ಮೃತಪಟ್ಟಿದ್ದಾರೆ, ಒಟ್ಟು ಮೃತರ ಸಂಖ್ಯೆ 323ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈನ ಧಾರಾವಿ ಕೊಳೆಗೇರಿಯಂತಹ ಜನನಿಬಿಡ ಪ್ರದೇಶಗಳಲ್ಲಿ ರೋಗಲಕ್ಷಣವಿಲ್ಲರೋಗಿಗಳಿಗೆ ಮತ್ತು ರೋಗಿಗಳ ಸಂಬಂಧಿಕರಿಗೆ ಹೈಡ್ರಾಕ್ಸಿಕ್ಲೋರೋಕ್ವಿನ್ ನೀಡಲು ಪ್ರಾರಂಭಿಸಿದೆ. ಇನ್ನು ಲಾಕ್ ಡೌನ್ ವಿಸ್ತರಣೆ ಬಗ್ಗೆ ಮಹಾರಾಷ್ಟ್ರ ಸರ್ಕಾರ ಇನ್ನು ತೀರ್ಮಾನ ಕೈಗೊಂಡಿಲ್ಲ.



