ಡಿವಿಜಿ ಸುದ್ದಿ, ಕೊಪ್ಪಳ: ಉಗ್ರ ಯಾವುದೇ ಸಮುದಾಯಕ್ಕೆ ಸೇರಿದ್ದರೂ ಉಗ್ರನೇ. ಉಗ್ರರನ್ನು ಸಮರ್ಥಿಸಿಕೊಳ್ಳುವುದು, ರಕ್ಷಣೆಗೆ ಪರೋಕ್ಷವಾಗಿ ಬೆಂಬಲಿಸುವುದು, ಆ ವಿಷಯದಲ್ಲಿ ರಾಜಕೀಯ ಮಾಡುವುದು ಹೇಯ ಕೃತ್ಯ. ಈ ವಿಚಾರದಲ್ಲಿ ರಾಜಕೀಯ ಮಾಡುವ ಕುಮಾರಸ್ವಾಮಿ ಅಂತಹ ನಾಲಾಯಕ್, ಅಯೋಗ್ಯನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ವಾ ಎಂದು ಜನ ಮಾತನಾಡುತ್ತಿದ್ದಾರೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದರು .
ಗಂಗಾವತಿ ತಾಲೂಕಿನ ಅಂಜನಾದ್ರಿಗೆ ಆಗಮಿಸಿದ್ದ ಮುತಾಲಿಕ್ ಅವರು ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಉಗ್ರರ ವಿಚಾರದಲ್ಲ ರಾಜಕೀಯ ಮಾಡೋದು ಸರಿಯಲ್ಲ. ಅದು ಆದಿತ್ಯ ರಾವ್ ಇರಬಹುದು, ಅಬ್ದುಲ್ ಇರಬಹುದು. ಯಾರೇ ತಪ್ಪು ಮಾಡಿದರೂ ಅವರಿಗೆ ಕಾನೂನು ಶಿಕ್ಷೆ ಕೊಡುತ್ತದೆ ಎಂದು ಹೇಳಿದರು
ಪೊಲೀಸ್ ಅಧಿಕಾರಿಗಳ ವಿರುದ್ಧ ಕುಮಾರಸ್ವಾಮಿ ಅವರು ಬಹಳ ಅಸಹ್ಯವಾಗಿ ಮಾತನಾಡಿದ್ದಾರೆ. ಕರ್ನಾಟಕಕ್ಕೆ ನಾಲಾಯಕ್, ಅಯೋಗ್ಯನನ್ನ ಮುಖ್ಯಮಂತ್ರಿಯನ್ನಾಗಿ ಮಾಡಿದ್ವಾ ಎಂದು ಜನ ಮಾತನಾಡುತ್ತಿದ್ದಾರೆ. ಹಿಂದಿನ ಸರ್ಕಾರಗಳು ಭಯೋತ್ಪಾದಕರನ್ನ ಪೋಷಣೆ ಮಾಡ್ತಿವೆ. ಆದರೆ ಬಿಜೆಪಿ ಸರ್ಕಾರ ಭಯೋತ್ಪಾದಕರನ್ನ ಒದ್ದು ಒಳಗೆ ಹಾಕ್ತಿದೆ ಎಂದರು.