ಡಿವಿಜಿಸುದ್ದಿ.ಕಾಂ, ಚಿತ್ರದುರ್ಗ: ತರಳಬಾಳು ಮಠದ ಶಾಖಾ ಮಠದ ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘವು ನೀಡುವ ಪ್ರತಿಷ್ಠಿತ ಶ್ರೀ ಶಿವಕುಮಾರ ಪ್ರಶಸ್ತಿಗೆ ನಟ, ನಿರ್ದೇಶಕ ಟಿ.ಎಸ್. ನಾಗಾಭರಣ ಅವರನ್ನು ಆಯ್ಕೆಯಾಗಿದ್ದಾರೆ.
ಕಳೆದ 15 ವರ್ಷಗಳಿಂದ ರಂಗಭೂಮಿಯಲ್ಲಿ ಸೇವೆ ಸಲ್ಲಿಸಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಈ ಬಾರಿ ನಾಗಾಭರಣ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಾಣೇಹಳ್ಳಿ ಮಠದ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ. ಪ್ರಶಸ್ತಿಯು 50 ಸಾವಿರ ನಗದು ಹಾಗೂ ಫಲಕಗಳನ್ನು ಒಳಗೊಂಡಿರುತ್ತದೆ.
ನವೆಂಬರ್ 2 ರಿಂದ 7 ರವರೆಗೆ ಸಾಣೇಹಳ್ಳಿಯಲ್ಲಿ ನಡೆಯುವ ರಾಷ್ಟ್ರೀಯ ನಾಟಕೋತ್ಸವದಲ್ಲಿ ನ. 7 ರಂದು ಪ್ರಶಸ್ತಿ ಪ್ರದಾನ ನಡೆಯಲಿದೆ.



