ಮುಂಬೈ: ಮುಂಬೈ ನಗರ ಸಮೀಪವಿರುವ ಥಾಣೆ, ಕಲ್ಯಾಣ್ ದೊಂಬಿವಿಲಿ, ಮೀರಾ ಭಯಂದರ್ ನಗರದಲ್ಲಿ ಇಂದಿನಿಂದ 10 ದಿನಗಳವರೆಗೆ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲಾಗಿದೆ.
ಈ ಭಾಗದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ನಗರಾಡಳಿತ 10 ದಿನಗಳವರೆಗೆ ಈ ಮೂರು ನಗರಗಳಲ್ಲಿ ಲಾಕ್‌ಡೌನ್ ಜಾರಿಗೊಳಿಸಿವೆ.

ಅಗತ್ಯ ಸೇವೆಗಳು ಮತ್ತು ವೈದ್ಯಕೀಯ ತುರ್ತು ಸೇವೆಗಳಿಗೆ ಲಾಕ್‌ಡೌನ್‌ನಿಂದ ವಿನಾಯಿತಿ ನೀಡಲಾಗಿದೆ. ನಗರದ ವ್ಯಾಪ್ತಿಯಲ್ಲಿ ಬಸ್, ಆಟೊ, ಟ್ಯಾಕ್ಸಿ ಸಂಚಾರಕ್ಕೆ ಅವಕಾಶವಿಲ್ಲ. ಇಂದಿನಿಂದ ಬೆಳಿಗ್ಗೆ 7 ಗಂಟೆಯಿಂದ ನಿಯಮ ಜಾರಿಯಾಗಿದ್ದು, ಜುಲೈ 12ರ ಬೆಳಿಗ್ಗೆ 7 ಗಂಟೆಯವರೆಗೆ ಜಾರಿಯಲ್ಲಿರಲಿದೆ.
ಇನ್ನು ನವಿ ಮುಂಬೈ ಮತ್ತು ಪನ್ವೆಲ್ ನರ ಪ್ರದೇಶದಲ್ಲಿ ಜುಲೈ 3ರ ಮಧ್ಯರಾತ್ರಿಯಿಂದ ಸಂಪೂರ್ಣ ಲಾಕ್‌ಡೌನ್ ಜಾರಿಗೊಳ್ಳುವ ಸಾಧ್ಯತೆ ಇದೆ. ಥಾಣೆ ಜಿಲ್ಲಾ ವ್ಯಾಪ್ತಿಯಲ್ಲಿ ಒಂದೇ ದಿನ 1,322 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದವು.



