Connect with us

Dvgsuddi Kannada | online news portal | Kannada news online

ನ್ಯಾಷನಲ್ ಡಿಜಿಟಲ್ ಹೆಲ್ತ್ ಮಿಷನ್  ಹೊಸ ಯೋಜನೆ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

ಪ್ರಮುಖ ಸುದ್ದಿ

ನ್ಯಾಷನಲ್ ಡಿಜಿಟಲ್ ಹೆಲ್ತ್ ಮಿಷನ್  ಹೊಸ ಯೋಜನೆ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: 74 ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನ್ಯಾಷನಲ್ ಡಿಜಿಟಲ್ ಹೆಲ್ತ್ ಮಿಷನ್ ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಿದರು.

ಕೆಂಪುಕೋಟಿಯಲ್ಲಿ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನ್ಯಾಷನಲ್ ಡಿಜಿಟಲ್ ಹೆಲ್ತ್ ಮಿಷನ್ ಯೋಜನೆ ಘೋಷಿಸಿದರು.

ಈ ಯೋಜನೆಯಿಂದ ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಡಿಜಿಟಲ್ ಹೆಲ್ತ್ ಐಡಿ ದೊರೆಯಲಿದ್ದು,  ವ್ಯಕ್ತಿಯ ಆರೋಗ್ಯ ದಾಖಲೆಗಳು ಡಿಜಿಟಲ್ ರೂಪದಲ್ಲಿ ಲಭ್ಯವಾಗಲಿದೆ.  ದೇಶದಾದ್ಯಂತ ಯಾವುದೇ ಭಾಗದಲ್ಲಿ ಪರೀಕ್ಷೆ ಒಳಪಟ್ಟಿದ್ದರೂ, ವೈದ್ಯಕೀಯ ಮಾಹಿತಿ ಡಿಜಿಟಲ್ ಹೆಲ್ತ್ ಕಾರ್ಡ್ ನಲ್ಲಿ  ಮಾಹಿತಿ ಲಭ್ಯವಾಗಲಿದೆ. ಸರ್ಕಾರದ ಆರೋಗ್ಯ ಸೌಲಭ್ಯಗಳೊಂದಿಗೆ ಈ ಕಾರ್ಡ್ ಲಿಂಕ್ ಆಗಲಿದೆ.

ಪ್ರತಿಯೊಬ್ಬ ಭಾರತೀಯನಿಗೂ ಹೆಲ್ತ್ ಐಡಿ ನೀಡಲಾಗುವುದು. ಯೋಜನೆಯಿಂದ ಬಡವರಿಗೆ ಪ್ರಯೋಜನವಾಗಲಿದೆ ಎಂದು ಮೋದಿ ಹೇಳಿದ್ದಾರೆ. ವೈದ್ಯರು ಯಾವ ಔಷಧ ತೆಗದುಕೊಳ್ಳಲು ಸೂಚಿಸಿದ್ದಾರೆ, ಯಾವಾಗ ಅದನ್ನು ಸೂಚಿಸಲಾಗಿದೆ ಎಂಬ ಮಾಹಿತಿ ಜತೆಗೆ ಆರೋಗ್ಯಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಗಳು ವ್ಯಕ್ತಿಯ ಹೆಲ್ತ್ ಐಡಿನಲ್ಲಿ ಸಿಗಲಿದೆ.

ಆಯುಷ್ಮಾನ್ ಭಾರತ’ದ ಬಳಿಕ ಆರೋಗ್ಯ ಕ್ಷೇತ್ರದ ಅತ್ಯಂತ ಮಹತ್ವದ ಯೋಜನೆ ಇದಾಗಿರಲಿದೆ. ಯೋಜನೆಯ ನೀಲನಕ್ಷೆಯನ್ನು ಕಳೆದ ವರ್ಷ ರೂಪಿಸಲಾಗಿತ್ತು. ದತ್ತಾಂಶಗಳು ಹಾಗೂ ಮೂಲಸೌಕರ್ಯ ಸೇವೆಗಳ ಮೂಲಕ ದಕ್ಷ ಮತ್ತು ಕೈಗೆಟಕುವ ದರಲ್ಲಿ ಪ್ರತಿಯೊಬ್ಬರಿಗೂ ಆರೋಗ್ಯ ಸುರಕ್ಷತೆ ಒದಗಿಸುವ ಗುರಿ ಹೊಂದಿದೆ.

ತಂತ್ರಜ್ಞಾನ ಆಧಾರಿತ ಯೋಜನೆಯಾಗಿದ್ದು, ಎಲ್ಲರಿಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಡಿಜಿಟಲ್ ವ್ಯವಸ್ಥೆಗಳನ್ನು ಬಳಸಿಕೊಳ್ಳಲಾಗುತ್ತದೆ. ಇದು ಅನೇಕ ಡಿಜಿಟಲ್ ಆರೋಗ್ಯ ಸೇವೆಗಳನ್ನು ಒಟ್ಟುಗೂಡಿಸಿ ಅಸ್ತಿತ್ವದಲ್ಲಿರುವ ಆರೋಗ್ಯ ಮಾಹಿತಿಗಳನ್ನು ಸಂಯೋಜಿಸಲು ನೆರವಾಗಲಿದೆ. ವೈಯಕ್ತಿಯಕ ಮಾಹಿತಿಯ ಸುರಕ್ಷತೆ ಮತ್ತು ಗೋಪ್ಯತೆಯನ್ನು ಖಾತರಿಪಡಿಸಲಾಗುತ್ತದೆ ಎಂದು ಸರ್ಕಾರ ಹೇಳಿದೆ.ಹೆಲ್ತ್ ಐಡಿಯು ಮೊಬೈಲ್ ಆ್ಯಪ್ ರೂಪದಲ್ಲಿ ಇರಲಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top