ಮುಂಬೈ: ತಾಯಿ ಸಾವನ್ನಪ್ಪಿದ ಕೇವಲ 5 ದಿನಗಳಲ್ಲೇ ಬಾಲಿವುಟ್ ನಟ ಇರ್ಫಾನ್ ಖಾನ್ (53) ಕೂಡ ವಿಧಿವಶರಾಗಿದ್ದಾರೆ.
ನ್ಯೂರೊಎಂಡ್ರೊಕ್ರೈನ್ ಟ್ಯೂಮರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ವಿದೇಶದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರವಷ್ಟೇ ಅವರ ತಾಯಿ ತೀರಿಕೊಂಡಿದ್ದರು. ಆದರೆ ಲಾಕ್‍ಡೌನ್ ಹಿನ್ನೆಲೆ ಇರ್ಫಾನ್ ಖಾನ್ ಅವರು ತಾಯಿಯ ಅಂತಿಮ ಸಂಸ್ಕಾರಕ್ಕೆ ಹೋಗಿರಲಿಲ್ಲ. ವಿಡಿಯೋ ಕಾನ್ಫರೆನ್ಸ್ ಮೂಲಕ ಅಂತಿಮ ದರ್ಶನ ಪಡೆದಿದ್ದರು.

ಮುಂಬೈನ ಕೋಕಿಲಾಬೆನ್ ಧೀರೂಭಾಯ್ ಅಂಬಾನಿ ಅಸ್ಪತ್ರೆಯ ಐಸಿಯುನಲ್ಲಿ ಇರ್ಫಾನ್ ಖಾನ್ ಚಿಕಿತ್ಸೆ ಪಡೆಯುತ್ತಿದ್ದರು. ಕೊಲೊನ್ ಇನ್‍ಫೆಕ್ಷನ್‍ನಿಂದಾಗಿ ಇರ್ಫಾನ್ ಅವರನ್ನು ಅಬ್ಸರ್ವೇಶನ್‍ನಲ್ಲಿ ಇಡಲಾಗಿತ್ತು. ಇರ್ಫಾನ್ ಖಾನ್ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.
2018ರಲ್ಲಿ ಅವರು ನ್ಯೂರೊಎಂಡೊಕ್ರೈನ್ ಟೂಮರ್ ಇರುವುದಾಗಿ ಬಹಿರಂಗ ಪಡಿಸಿದ್ದರು. ವಿಶ್ವ ಮಟ್ಟದ ಸಿನಿಮಾಗಳ ಪೈಕಿ ಇರ್ಫಾನ್; ಸ್ಲಂಡಾಗ್ ಮಿಲಿಯನೇರ್, ದಿ ಲೈಫ್ ಆಫ್ ಪೈ, ದಿ ಮೈಟಿ ಹಾರ್ಟ್ ಹಾಗೂ ಜುರಾಸಿಕ್ ವರ್ಲ್ಡ್ ಚಿತ್ರಗಳ ಮೂಲಕ ಗುರುತಿಸಿಕೊಂಡಿದ್ದಾರೆ.



