ನವದೆಹಲಿ: ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷ ಸ್ಥಾನದಿಂದ ನನ್ನನ್ನು ತೆರವುಗೊಳಿಸಿ ಎಂದು ಸೋನಿಯಾ ಗಾಂಧಿ ಅವರು ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮನವಿ ಮಾಡಿದ್ದಾರೆ.
ಪಕ್ಷದ ಹೊಸ ಮುಖ್ಯಸ್ಥರನ್ನು ಆಯ್ಕೆ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ಕರೆ ನೀಡಿದರು. ಆದರೆ, ಈ ಸಭೆಯಲ್ಲಿ ಸೋನಿಯಾ ಅವರೇ ಮುಂದುವರಿಯಬೇಕು ಎಂದು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಒತ್ತಾಯಿಸಿದ್ದಾರೆ. ಅಧ್ಯಕ್ಷೆ ಹುದ್ದೆ ತ್ಯಜಿಸುವ ಮುನ್ನ ಸೋನಿಯಾ ಅವರು ಹಿರಿಯರ ಪತ್ರವನ್ನು ಉಲ್ಲೇಖಿಸಿದ್ದಾರೆ.

ಕೆಲವು ನಾಯಕರು ಪತ್ರ ಬರೆದಿರುವುದನ್ನು ಟೀಕಿಸಿದ ರಾಹುಲ್ ಗಾಂಧಿ, ಕೋವಿಡ್ 19, ಮಧ್ಯಪ್ರದೇಶ, ರಾಜಸ್ಥಾನ ಬಿಕ್ಕಟ್ಟಿನ ಸಮಯದಲ್ಲಿ ಹಿರಿಯ ನಾಯಕರಾದವರು ಈ ರೀತಿ ಪತ್ರ ಬರೆಯುವುದು ಸರಿಯಲ್ಲ ಎಂದಿದ್ದರು. ಪಕ್ಷದ ಆಂತರಿಕ ವಿಷಯವನ್ನು ಬಹಿರಂಗಪಡಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
https://twitter.com/ANI/status/1297772132445773824?ref_src=twsrc%5Etfw%7Ctwcamp%5Etweetembed%7Ctwterm%5E1297772132445773824%7Ctwgr%5E&ref_url=https%3A%2F%2Fwww.prajavani.net%2Findia-news%2Fcongress-leadership-crisis-live-updates-congress-working-committee-meeting-sonia-gandhi-rahul-gandhi-755589.html
ಸಭೆಯಲ್ಲಿ ಮನಮೋಹನ್ ಸಿಂಗ್, ಪ್ರಿಯಾಂಕಾ ಗಾಂಧಿ ವಾದ್ರಾ, ಕ್ಯಾಪ್ಟನ್ ಅಮರಿಂದರ್ ಸಿಂಗ್ ಸೇರಿದಂತೆ ಪಕ್ಷದ ಪ್ರಮುಖರು ಭಾಗಿಯಾಗಿದ್ದರು.



