ನವದೆಹಲಿ: 960 ವಿದೇಶಿ ತಬ್ಲಿಘಿ ಜಮಾತ್ ಸದಸ್ಯರಿಗೆ 10 ವರ್ಷ ಭಾರತ ಪ್ರವೇಶಿಸದಂತೆ ನಿಷೇಧಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ನಿಷೇಧಕ್ಕೆ ಒಳಪಟ್ಟ 960 ಸದಸ್ಯರಿಗೆ ಹತ್ತು ವರ್ಷಗಳ ಕಾಲ ಭಾರತ ಪ್ರವೇಶಿಸದಂತೆ ನಿಷೇಧ ಹೇರಲಾಗಿದ್ದು, ಈಗಾಗಲೇ ಕಪ್ಪುಪಟ್ಟಿಗೆ ಸೇರಿಸಲಾಗಿದೆ. ದೇಶದಾದ್ಯಂತ ಕೊರೊನಾ ವೈರಸ್ ಸೋಂಕು ದೆಹಲಿಯ ನಿಜಾಮುದ್ದೀನ್ ತಬ್ಲಿಘಿ ಜಮಾತ್ ಸಭೆಯಿಂದಲೇ ಹರಡಿತ್ತು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿತ್ತು.
960 blacklisted foreign nationals banned for 10 years from travelling to India for their involvement in Tablighi Jamaat activities: Government sources pic.twitter.com/W5X6e6TU4y
— ANI (@ANI) June 4, 2020
ಈ ಸಭೆಯಲ್ಲಿ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ತಬ್ಲಿಘಿಗಳು ಭಾಗಿಯಾಗಿದ್ದರು. ಇದರಿಂದ ಕೊರೊನಾ ವ್ಯಾಪಕವಾಗಿ ಕಾರಣವಾಗಿತ್ತು.



