ನವದೆಹಲಿ: ಎಐಸಿಸಿ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ಭಿನ್ನಮತ ಸ್ಟೋಟಗೊಂಡಿದ್ದು, ಕಾಂಗ್ರೆಸ್ ಹಿರಿಯ ನಾಯಕರು ರಾಹುಲ್ ಗಾಂಧಿ ವಿರುದ್ಧ ಗರಂ ಆಗಿದ್ದಾರೆ. ಇದರ ಮಧ್ಯೆ ಇಲ್ಲಿವರೆಗೆ ತಟಸ್ಥವಾಗಿದ್ದ ಮಾಜಿ ಸಂಸದೆ ರಮ್ಯಾ ಎಂಟ್ರಿ ಕೊಟ್ಟಿದ್ದು, ಕೈ ಸಭೆಯ ಮಾಹಿತಿ ಸೋರಿಕೆಯಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಮ್ಯಾ, ಬಂಡಾಯಕ್ಕೆ ಕಾರಣವಾದ 23 ಮಂದಿ ಪತ್ರ ಬರೆದು ಅದನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಾರೆ. ಅಲ್ಲದೆ ಕಾಂಗ್ರೆಸ್ ಸಭೆಯ ಪ್ರತಿ ಕ್ಷಣದ ಮಾಹಿತಿಗಳನ್ನು ನೀಡುವ ಮೂಲಕ ಎಲ್ಲಾ ವಿಚಾರಗಳನ್ನು ಸೋರಿಕೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
Not only did they leak the letter to the media, they continue to feed/leak minute to minute conversations of the CWC meeting that's going on right now to the media. Amazing!
— Ramya/Divya Spandana (@divyaspandana) August 24, 2020
ಕಾಂಗ್ರೆಸ್ ಅಧ್ಯಕ್ಷ ಆಯ್ಕೆ ವಿಚಾರವಾಗಿ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಹಿರಿಯ ನಾಯಕರ ಬಂಡಾಯದ ಬಗ್ಗೆ ಚರ್ಚೆ ಆಗಿದೆ.. ಝೂಮ್ ಅಪ್ಲಿಕೇಶನ್ ಮೂಲಕ ಈ ಸಭೆ ನಡೆಯುತ್ತಿದ್ದು, ಹಿರಿಯ ನಾಯಕರು ಭಾಗವಹಿಸಿದ್ದಾರೆ. ಸಭೆಯ ಆರಂಭದಲ್ಲೇ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೊಸ ಅಧ್ಯಕ್ಷರನ್ನು ಹುಡುಕಿ. ನಾನು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವುದಿಲ್ಲ ಎಂದು ಹೇಳಿದ್ದಾರೆ.

ಈ ವೇಳೆ 20 ಪ್ರಮುಖರ ನಾಯಕರು ಪತ್ರ ಬರೆದ ವಿಚಾರಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅಸಮಾಧಾನ ವ್ಯಕ್ತಪಡಿಸಿದರು. ಕೋವಿಡ್ 19, ಮಧ್ಯಪ್ರದೇಶ, ರಾಜಸ್ಥಾನ ಬಿಕ್ಕಟ್ಟಿನ ಸಮಯದಲ್ಲಿ ಹಿರಿಯ ನಾಯಕರಾದವರು ಈ ರೀತಿ ಪತ್ರ ಬರೆಯುವುದು ಸರಿಯಲ್ಲ ಎಂದು ರಾಹುಲ್ ಆಕ್ಷೇಪ ವ್ಯಕ್ತಪಡಿಸಿದ್ದರು.



