Connect with us

Dvgsuddi Kannada | online news portal | Kannada news online

ಭಾರತದಲ್ಲಿ 35 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

ಪ್ರಮುಖ ಸುದ್ದಿ

ಭಾರತದಲ್ಲಿ 35 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

ನವದೆಹಲಿ ಮಹಾಮಾರಿ ಕೊರೊನಾ ವೈರಸ್ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದ್ದು, ಸೋಂಕಿತರ ಸಂಖ್ಯೆ 35 ಸಾವಿರ ಗಡಿ ದಾಟಿದೆ.  ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 1,993 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 73 ಸಾವು ಸಂಭವಿಸಿದೆ. ಸೋಂಕಿತರ ಸಂಖ್ಯೆ, 35,043ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಈವರೆಗೆ 1,147 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. 25,007 ಸೋಂಕಿತರು ವಿವಿಧ ರಾಜ್ಯಗಳ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 8,889 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.

ಇಡೀ ದೇಶದಲ್ಲಿ ಮಹಾರಾಷ್ಟ್ರದಲ್ಲಿ ಅತಿಹೆಚ್ಚು ಪ್ರಕರಣಗಳು ದಾಖಲಾಗಿದ್ದು, 10,498 ಪ್ರಕರಣ ದಾಖಲಾಗಿದ್ದು, ಇದರಲ್ಲಿ 459 ಮಂದಿ ಮೃತಪಟ್ಟಿದ್ದಾರೆ.  ಗುಜರಾತ್‌ನಲ್ಲಿ 214, ಮಧ್ಯಪ್ರದೇಶದಲ್ಲಿ 137, ದೆಹಲಿಯಲ್ಲಿ 59, ರಾಜಸ್ಥಾನದಲ್ಲಿ 58, ಉತ್ತರ ಪ್ರದೇಶದಲ್ಲಿ 39 ಮತ್ತು ಆಂಧ್ರ ಪ್ರದೇಶದಲ್ಲಿ 31 ಮಂದಿ ಕೊರೊನಾ ಸೋಂಕಿನಿಂದ ಮರತಪಟ್ಟಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top