ನವದೆಹಲಿ: ಕೊರೊನಾವೈರಸ್‌ನಿಂದ ದೇಶದಲ್ಲಿ ಉಂಟಾಗಿರುವ ಬಿಕ್ಕಟ್ಟಿಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಕಮಲ್‌ನಾಥ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ
ಸುದ್ದಿಗೋಷ್ಠಿಯಲ್ಲಿಬಮಾತನಾಡಿದ ಅವರು, ಮಧ್ಯಪ್ರದೇಶದ ಜನರನ್ನು ಬಿಜೆಪಿ ಮೂರ್ಖರನ್ನಾಗಿ ಮಾಡಿದ್ದು, ಕೊರೊನಾವೈರಸ್ ವ್ಯಾಪಕವಾಗಿ ಹರಡುತ್ತಿದ್ದರೂ ಅಲ್ಲಿ ಆರೋಗ್ಯ ಸಚಿವರಾಗಲೀ, ಗೃಹ ಸಚಿವರಾಗಲೀ ಕಾಣಿಸುತ್ತಿಲ್ಲ. ನಮ್ಮ ಸ್ಥಿತಿ ಬೇರೆ ಯಾವ ರಾಜ್ಯದಲ್ಲಿಯೂ ಆಗಿರಲಿಕ್ಕಿಲ್ಲ ಎಂದಿದ್ದಾರೆ.
ದೇಶದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ರೋಗದ ಪರೀಕ್ಷೆ ನಡೆಸಬೇಕಿದೆ. ದೇಶ ಆರ್ಥಿಕ ಕುಸಿತ ಅನುಭವಿಸಲಿದ್ದು, ಕೇಂದ್ರದ ಆರ್ಥಿಕ ಪ್ಯಾಕೇಜ್‌ಗಳತ್ತ ಹೆಚ್ಚಿನ ಗಮನ ಹರಿಸಬೇಕಿದೆ ಎಂದಿದ್ದಾರೆ.



