ಹೈದರಾಬಾದ್: ಕೋವಿಡ್ 19ಗೆ ಭಾರತದ ಹೈದರಾಬಾದ್ ಮೂಲದ ಕಂಪನಿಯೊಂದು ಲಸಿಕೆಯನ್ನು ಕಂಡು ಹಿಡಿದಿದೆ. ಆಗಸ್ಟ್ 15ರೊಳಗೆ ಸಾರ್ವಜನಿಕ ಬಳಕೆಗಾಗಿ ಲಭ್ಯವಾಗುವುದಾಗಿ ಇಂಡಿಯನ್ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್(ಐಸಿಎಂಆರ್) ಮಾಹಿತಿ ನೀಡಿದೆ.
ಕೋವಾಕ್ಸಿನ್ ಎಂಬ ಲಸಿಕೆಯನ್ನು ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಕಂಡುಹಿಡಿದಿದೆ. ಇಂಡಿಯನ್ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್(ಐಸಿಎಂಆರ್) ಮತ್ತು ರಾಷ್ಟ್ರೀಯ ವೈರಾಲಜಿ ಇನ್ಸ್ಟಿಟ್ಯೂಟ್(ಎನ್ಐವಿ) ಸಹಭಾಗಿತ್ವದಲ್ಲಿ ಲಸಿಕೆಯನ್ನು ಅಭಿವೃದ್ಧಿ ಪಡಿಸಿದೆ. ಇದೀಗ ಲಸಿಕೆ ಬಿಡುಗಡೆಯ ಬಗ್ಗೆ ಐಸಿಎಂಆರ್ ಡಿಜಿ ಬಲರಾಮ್ ಭಾರ್ಗವ ಅವರು ಭಾರತ್ ಬಯೋಟೆಕ್ ಮತ್ತು ವೈದ್ಯಕೀಯ ಕಾಲೇಜುಗಳ ಪ್ರಧಾನ ತನಿಖಾಧಿಕಾರಿಗಳಿಗೆ ಪತ್ರ ಬರೆದದು ಮಾಹಿತಿ ನೀಡಿದ್ದಾರೆ.

ಕೋವಿಡ್ ಲಸಿಕೆ ಪ್ರಯೋಗ ಪ್ರಕ್ರಿಯೆ ಪೂರ್ಣಗೊಳಿಸಿ. ಇದರಿಂದ ಆಗಸ್ಟ್ 15ರೊಳಗೆ ಕ್ಲಿನಿಕಲ್ ಪ್ರಯೋಗ ಪ್ರಾರಂಭಿಸಬಹುದು ಎಂದು ಬಲರಾಮ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.



