ನವದೆಹಲಿ: ದೇಶದಾದ್ಯಂತ ಕೊರೊನಾ ಅಬ್ಬರ ಮುಂದುವರೆದಿದ್ದು, ಕಳೆದ 24 ಗಂಟೆ ಅವಧಿಯಲ್ಲಿ ಗಂಟೆ 61,408 ಜನರಿಗೆ ಸೋಂಕು ತಗುಲಿದ್ದು, 836 ಮಂದಿ ಮೃತಪಟ್ಟಿದ್ದಾರೆ.
ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದ್ದು, 57,468 ಮಂದಿ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದಾರೆ.ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಇದೀಗ 31,06,349ಕ್ಕೆ ತಲುಪಿದೆ. ಇದರಲ್ಲಿ 23,38,036 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 57,542 ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ 5,938 ಹೊಸ ಪ್ರಕರಣಗಳು ವರದಿಯಾಗಿದ್ದು ,4,996 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.



