Connect with us

Dvgsuddi Kannada | online news portal | Kannada news online

ದೆಹಲಿಯಲ್ಲಿ ಐಪಿಎಲ್ ಪಂದ್ಯ ರದ್ದು

ಪ್ರಮುಖ ಸುದ್ದಿ

ದೆಹಲಿಯಲ್ಲಿ ಐಪಿಎಲ್ ಪಂದ್ಯ ರದ್ದು

ನವದೆಹಲಿ: ಕೊರೊನಾ ವೈರಸ್ ಹಿನ್ನೆಲೆ ದೆಹಲಿಯಲ್ಲಿ ಆಯೋಜಿಸಲಾಗಿರುವ  ಎಲ್ಲಾ  ಐಪಿಎಲ್ ಪಂದ್ಯವನ್ನು ರದ್ದುಗೊಳಿಸಲಾಗಿದೆ ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ತಿಳಿಸಿದ್ದಾರೆ.

ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಪಂದ್ಯ ವೀಕ್ಷಿಸಲು ಸಾವಿರಾರು ಮಂದಿ ಕ್ರೀಡಾಂಗಣಕ್ಕೆ ಬರುತ್ತಾರೆ  ಅವರಿಗೆ ಕೊರೊನಾ ಸೊಂಕು ತಗುಲಿದೆಯಾ ಎಂಬುದನ್ನು ಕಂಡು ಹಿಡಿಯಲು ಸಾಧ್ಯವಿಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಐಪಿಎಲ್ ಸೇರಿದಂತೆ ಎಲ್ಲ ಕ್ರೀಡಾ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ದಕ್ಷಣ ಆರ್ಫಿಕಾ ಮತ್ತು ಭಾರತ ನಡುವಿನ ಏಕದಿನ ಪಂದ್ಯಗಳನ್ನು ಪ್ರೇಕ್ಷಕರು ಇಲ್ಲದೇ ಆಯೋಜಿಸಲು ಬಿಸಿಸಿಐ ಮುಂದಾಗಿದೆ. ಹೀಗಾಗಿ ಐಪಿಎಲ್ ಪಂದ್ಯಗಳನ್ನು ಪ್ರೇಕ್ಷಕರು  ಇಲ್ಲದೆ ನಡೆಯುತ್ತಾ ಎನ್ನುವುದು ಇನ್ನು ನಿರ್ಧಾರವಾಗಿಲ್ಲ. ಈಗಾಗಲೇ ದೆಹಲಿ ಸರ್ಕಾರ ಸಾರ್ವಜನಿಕವಾಗಿ 200ಕ್ಕೂ ಹೆಚ್ಚು ಜನ ಪಾಲ್ಗೊಳ್ಳುವ ಸಮಾರಂಭವನ್ನು ನಿಷೇಧಿಸಿದ್ದು, ಶಾಲಾ, ಕಾಲೇಜು, ಸಿನಿಮಾ ಮಂದಿರಗಳು ಮಾರ್ಚ್ 31ರವರೆಗೆ ಮುಚ್ಚುವಂತೆ ಆದೇಶಿಸಿದೆ ಎಂದು ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top