Connect with us

Dvg Suddi-Kannada News

ದೆಹಲಿ ಹಿಂಸಾಚಾರಕ್ಕೆ 10 ಬಲಿ, 150 ಜನ ಗಾಯ

ಪ್ರಮುಖ ಸುದ್ದಿ

ದೆಹಲಿ ಹಿಂಸಾಚಾರಕ್ಕೆ 10 ಬಲಿ, 150 ಜನ ಗಾಯ

ನವದೆಹಲಿಸಿಎಎ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ  ಹಿಂಸಾಚಾರ ರೂಪಕ್ಕ ತಿರುಗಿದೆ. ಪ್ರತಿಭಟನೆಯಲ್ಲಿ ಇದುವರೆಗೆ 10 ಜನ ಮೃತಪಟ್ಟಿದ್ದು, 150 ಜನ ಗಾಯಗೊಂಡಿದ್ದಾರೆ.

ಇಂದು ನಡೆದ ಹಿಂಸಾಚಾರದಲ್ಲಿ 5 ಸಾವನ್ನಪ್ಪಿದ್ದು, ಈವರೆಗೆ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 150 ಜನ ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಬ್ಬರು ಪತ್ರಕರ್ತರ ಮೇಲೆ  ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಖಾಜುರಿ ಖಾಸ್ ಪ್ರದೇಶದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ತುರ್ತು ಕಾರ್ಯಪಡೆ ಪಥಸಂಚಲನ ನಡೆಸಿದ್ದು, ಶಾಂತಿ ಕಾಪಾಡಲು ಪ್ರಯತ್ನ ನಡೆಸಿವೆ. ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಹೇರಲಾಗಿದೆ. ಈಶಾನ್ಯ ದೆಹಲಿಯಲ್ಲಿ ಅರೆಸೇನಾ ಪಡೆಗಳ 35 ತುಕಡಿಗಳನ್ನು ನಿಯೋಜಿಸಲಾಗಿದೆ.

ನಿನ್ನೆಓರ್ವ ಪೊಲೀಸ್ ಹೆಡ್‌ಕಾನ್ಸ್‌ಟೆಬಲ್ ಸೇರಿ ನಾಲ್ವರು ಮೃತಪಟ್ಟಿದ್ದರು. ಘರ್ಷಣೆಯಲ್ಲಿ ಮೃತಪಟ್ಟ ನಾಲ್ವರು ನಾಗರಿಕರ ದೇಹಗಳ ಮೇಲೆ ಗುಂಡೇಟಿನ ಕುರುಹುಗಳು ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದರು.ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಗುರು ತೇಗ್ ಬಹದ್ದೂರ್ ಆಸ್ಪತ್ರೆಗೆ ಗಾಯಗೊಂಡಿದ್ದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.

ಕೆಲವು ಕೋಮು ಶಕ್ತಿಗಳು ರಾಜಕೀಯ ಲಾಭಕ್ಕಾಗಿ ಧರ್ಮಗಳ ಮಧ್ಯೆ ಒಡಕು ತಂದಿಡುತ್ತಿವೆ. ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡಲು ಸರ್ಕಾರಕ್ಕೆ ನೆರವಾಗಬೇಕು ಎಂದು ಕಾಂಗ್ರೆಸ್  ವಕ್ತಾರ ರಣದೀಪ್ ಸುರ್ಜೇವಾಲಾ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top