ನವದೆಹಲಿ: ಮೇ 25 ರಿಂದ ದೇಶೀಯ ವಿಮಾನ ಸಂಚಾರ ಆರಂಭವಾಗುವುದು ಎಂದು ಕೇಂದ್ರ ವಿಮಾನಯಾನ ಸಚಿವಾಲಯ ತಿಳಿಸಿದೆ
ಕೆಲವು ನಿರ್ದಿಷ್ಟ ಮಾರ್ಗಸೂಚಿಗಳನ್ನು ಅನುಸರಿಸಿ ಸೋಮವಾರದಿಂದ ದೇಶೀಯ ವಿಮಾನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಈ ಕುರಿತು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಟ್ವೀಟ್ ಮಾಡಿದ್ದಾರೆ. ಈಗಾಗಲೇ ಎಲ್ಲಾ ಖಾಸಗಿ ವಿಮಾನಯಾನ ಸಂಸ್ಥೆಗಳಿಗೂ ಸಂದೇಶ ರವಾನಿಸಲಾಗಿದೆ, ಮೇ.25ರಿಂದ ವಿಮಾನ ಹಾರಾಟ ಆರಂಭಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಕೊರೊನಾ ವೈರಸ್ ಲಾಕ್‌ಡೌನ್ ಪರಿಣಾಮ ದೇಶೀಯ, ಅಂತರರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿರ್ಬಂಧ ವಿಧಿಸಿತ್ತು. ಇದೀಗ ದೇಶೀಯ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.



