Connect with us

Dvgsuddi Kannada | online news portal | Kannada news online

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡದ ಮಾಜಿ ಸಚಿವನಿಗೆ 7 ವರ್ಷ ಜೈಲು,  2 ಕೋಟಿ ದಂಡ

ಪ್ರಮುಖ ಸುದ್ದಿ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡದ ಮಾಜಿ ಸಚಿವನಿಗೆ 7 ವರ್ಷ ಜೈಲು,  2 ಕೋಟಿ ದಂಡ

ರಾಂಚಿಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿದ್ದ  ಜಾರ್ಖಂಡ್‌ನ ಮಾಜಿ ಸಚಿವ ಅನೋಶ್‌ ಎಕ್ಕಾ ಅವರಿಗೆ ಏಳು ವರ್ಷ ಕಠಿಣ ಜೈಲು ಶಿಕ್ಷೆ,  2 ಕೋಟಿ ದಂಡ ವಿಧಿಸಿ ರಾಂಚಿ ನ್ಯಾಯಾಲಯ ತೀರ್ಪು ನೀಡಿದೆ.

ಪಿಎಂಎಲ್‌ಎ ವಿಶೇಷ ನ್ಯಾಯಾಧೀಶ ಅನಿಲ್ ಕುಮಾರ್ ಮಿಶ್ರಾ ಅವರು ಶಿಕ್ಷೆಯ ಪ್ರಮಾಣವನ್ನು ಘೋಷಿಸಿದ್ದಾರೆ. ಹಣ ವರ್ಗಾವಣೆ ಪ್ರಕರಣದಲ್ಲಿ  ಅನೋಶ್‌ ಎಕ್ಕಾ ದೋಷಿ ಎಂದು  ಮಾರ್ಚ್‌ 21 ರಂದು ಜಾರ್ಖಂಡ್ ಕೋರ್ಟ್‌ ಹೇಳಿತ್ತು.

ಮಾಜಿ ಮುಖ್ಯಮಂತ್ರಿ ಮಧು ಕೋಡಾ ಹಾಗೂ ಎಕ್ಕಾ ಸಹ ಆರೋಪಿಯಾಗಿದ್ದರು. ಕೋಡಾ ಸಂಪುಟದಲ್ಲಿ ಎಕ್ಕಾ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು. ಪ್ರಕರಣದಲ್ಲಿ  ಜಾರಿ ನಿರ್ದೇಶನಾಲಯ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿತು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top