ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಾಂಪ್ರದಾಯದಂತೆ ‘ಹಲ್ವಾ ಸಮಾರಂಭ’ದ ಮೂಲಕ ಕೇಂದ್ರ ಸರ್ಕಾರದ 2020–21ನೇ ಸಾಲಿನ ಬಜೆಟ್ ದಾಖಲೆಗಳ ಮುದ್ರಣ ಪ್ರಕ್ರಿಯೆಗೆ ಸೋಮವಾರ ಚಾಲನೆ ನೀಡಿದರು.

ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಅವರು ಸಚಿವಾಲಯದ ಎಲ್ಲ ಸಿಬ್ಬಂದಿಗೆ ಸಿಹಿ ವಿತರಿಸಿದರು. ಹಣಕಾಸು ಕಾರ್ಯದರ್ಶಿ, ಕಂದಾಯ ಇಲಾಖೆ ಕಾರ್ಯದರ್ಶಿ ಡಿಐಪಿಎಎಂ ಕಾರ್ಯದರ್ಶಿ ಸೇರಿದಂತೆ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ ಭಾಗಿಯಾಗಿದ್ದರು.
ದೊಡ್ಡ ಕಡಾಯಿಯಲ್ಲಿ ತಯಾರಿಸಿದ ಹಲ್ವಾ ಹಂಚಿದ ನಂತರವಷ್ಟೇ ಸಿಬ್ಬಂದಿ ಬಜೆಟ್ ತಯಾರಿಕೆ ಮತ್ತು ಮುದ್ರಣ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಾರೆ. ಬಜೆಟ್ ಮಂಡನೆಯಾಗುವವರೆಗೂ ಸಿಬ್ಬಂದಿ ಕಚೇರಿಯಲ್ಲಿಯೇ ಉಳಿಯಲಿದ್ದಾರೆ



