Connect with us

Dvgsuddi Kannada | online news portal | Kannada news online

ಕ್ರಿಕೆಟರ್ ವಿರಾಟ್ ಕೊಹ್ಲಿ, ನಟಿ ತಮನ್ನಾ ಬಂಧನ ಕೋರಿ ಹೈಕೋರ್ಟಿನಲ್ಲಿ ಅರ್ಜಿ

ಕ್ರೈಂ ಸುದ್ದಿ

ಕ್ರಿಕೆಟರ್ ವಿರಾಟ್ ಕೊಹ್ಲಿ, ನಟಿ ತಮನ್ನಾ ಬಂಧನ ಕೋರಿ ಹೈಕೋರ್ಟಿನಲ್ಲಿ ಅರ್ಜಿ

ಚೆನ್ನೈ: ಆನ್‍ಲೈನ್ ಜೂಜಾಟವನ್ನು ಉತ್ತೇಜಿಸಿದ್ದಕ್ಕಾಗಿ ಟೀಂ ಇಂಡಿಯಾ ವಿರಾಟ್ ಕೊಹ್ಲಿ ಹಾಗೂ ನಟಿ ತಮನ್ನಾ ಅವರನ್ನು ಬಂಧಿಸುವಂತೆ ಕೋರಿ ಮದ್ರಾಸ್ ಹೈ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಚೆನ್ನೈ ಮೂಲದ ವಕೀಲರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಯುವ ಜನತೆ ಆನ್‍ಲೈನ್ ಜೂಜಾಟದ ಗೀಳಿಗೆ ಹೆಚ್ಚು ಆಕರ್ಷಿತರಾಗುತ್ತಿದ್ದು, ಪರಿಣಾಮ ಇವುಗಳ ಮೇಲೆ ನಿಷೇಧ ವಿಧಿಸುವಂತೆ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಆನ್‍ಲೈನ್ ಜೂಜಾಟ ಕಂಪೆನಿಗಳು ಭಾರೀ ಹಣವನ್ನು ನೀಡಿ ವಿರಾಟ್ ಕೊಹ್ಲಿ, ತಮನ್ನಾ ರಂತಹ ಸ್ಟಾರ್ ಕ್ರೀಡಾಪಟು ಹಾಗೂ ನಟ-ನಟಿಯನ್ನು ಬಳಿಸಿಕೊಂಡು ಯುವ ಜನತೆಯ ಬ್ರೈನ್ ವಾಶ್ ಮಾಡುತ್ತಿದ್ದಾರೆ ವಕೀಲರು ಆರೋಪಿಸಿದ್ದಾರೆ.

ಆನ್‍ಲೈನ್ ಜೂಜಾಟಕ್ಕೆ ಯುವಕರು ಮಾಡಿದ ಸಾಲದ ಹಣವನ್ನು ಹಿಂದಿರುಗಿಸಲು ಸಾಧ್ಯವಾಗದೇ ಆತ್ಮಹತ್ಯೆಯತ್ತ ಮುಖ ಮಾಡುತ್ತಿದ್ದಾರೆ ಎಂದು ಪ್ರಕರಣವೊಂದರ ಉದಾರಣೆಯೊಂದನ್ನು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಪ್ರಕರಣವನ್ನು ನ್ಯಾಯಾಲಯ ಮಂಗಳವಾರ ವಿಚಾರಣೆಗೆ ಮುಂದೂಡಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಕ್ರೈಂ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top