Connect with us

Dvgsuddi Kannada | online news portal | Kannada news online

ಕೊರೊನಾ ಭೀತಿ: ಐಪಿಎಲ್ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಪ್ರಮುಖ ಸುದ್ದಿ

ಕೊರೊನಾ ಭೀತಿ: ಐಪಿಎಲ್ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ನವದೆಹಲಿ: ಕೊರೊನಾ ಭೀತಿ ಹಿನ್ನೆಲೆ ಐಪಿಎಲ್ ಟಿ20 ಕ್ರಿಕೆಟ್ ಪಂದ್ಯವಾಳಿಯನ್ನು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ)  ಅನಿರ್ದಿಷ್ಟ ಅವಧಿಗೆ ಮುಂದೂಡಿದೆ.

ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಯುವ ಉದ್ದೇಶದಿಂದ ದೇಶದಲ್ಲಿ ವಿಧಿಸಲಾಗಿದ್ದ ಲಾಕ್‌ಡೌನ್ ವಿಸ್ತರಣೆಯಾದ ಬೆನ್ನಲ್ಲೇ ಬಿಸಿಸಿಐ ಪಂದ್ಯಾವಳಿಯನ್ನು ಮುಂದೂಡಿದೆ. ಈ ವರ್ಷ ಐಪಿಎಲ್ ಪಂದ್ಯಾವಳಿ ಮಾರ್ಚ್‌ 29ರಿಂದ ಆರಂಭವಾಗಬೇಕಿತ್ತು.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ  ಏಪ್ರಿಲ್ 15ರ ವರೆಗೆ ಮುಂದೂಡಲಾಗಿತ್ತು. ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 15ರಿಂದ ಮೇ 3ರ ವರೆಗೆ ಲಾಕ್‌ಡೌನ್ ವಿಸ್ತರಿಸಿದ್ದರಿಂದ ಐಪಿಎಲ್ ಪಂದ್ಯಾವಳಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

ಜಾಗತಿಕ ಆರೋಗ್ಯ ಕಾಳಜಿ ಮತ್ತು ಕೊರೊನಾ ತಡೆಯುವ ನಿಟ್ಟಿನಲ್ಲಿ ಮುಂದೂಡಲಾಗಿದೆ. ಈ ನಿರ್ಧಾರವನ್ನು ನಮ್ಮ ಎಲ್ಲ ಫ್ರಾಂಚೈಸಿ ಮಾಲೀಕರು, ಪ್ರಸಾರಕರು, ಪ್ರಾಯೋಜಕರು ಹಾಗೂ ಬಂಡವಾಳ ಹೂಡಿಕೆದಾರರು ಸಮ್ಮತಿಸಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top