ನವದೆಹಲಿ: ಮಧ್ಯಪ್ರದೇಶದ ಕಮಲನಾಥ್ ಸರ್ಕಾರದ ವಿರುದ್ಧ ಬಂಡಾಯ ಸಾರಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಯುವ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ದೆಹಲಿಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಂಧಿಯಾ ಅವರನ್ನು ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪಕ್ಷದ ಶಾಲನ್ನು ನೀಡಿ ಬಿಜೆಪಿಗೆ ಬರಮಾಡಿಕೊಂಡರು. ಮಂಗಳವಾರ ಸಿಂಧಿಯಾ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಬೆನ್ನಲ್ಲೇ ಅವರ ಆಪ್ತರಾಗಿದ್ದ 22 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದರು.
Jyotiraditya Scindia: I would like to thank JP Nadda ji, PM Narendra Modi, Home Minister Amit Shah that they invited me to their family and gave me a place in it. pic.twitter.com/HA1z21HPyK
— ANI (@ANI) March 11, 2020
ಒಟ್ಟು 230 ವಿಧಾನ ಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ 22 ಶಾಸಕರ ರಾಜೀನಾಮೆ 2 ಬಿಜೆಪಿ ನಾಯಕರ ತೆರವಿನಿಂದ ಮಧ್ಯಪ್ರದೇಶ ಸನದ ಸಂಖ್ಯಾ ಬಲ 206ಕ್ಕೆ ಕುಸಿದಿದೆ. ಕಮಲನಾಥ್ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಬಹುಮತ ಸಾಬೀತು ಮಾಡಲು 104 ಶಾಸಕರ ಬೆಂಬಲ ಅಗತ್ಯವಿದ್ದು, ಬಿಜೆಪಿ ಬಳಿ 107 ಶಾಸಕರಿದ್ದಾರೆ . ಕಾಂಗ್ರೆಸ್ ಬಳಿ 92 ಶಾಸಕರಿದ್ದಾರೆ.
#WATCH Live from Delhi: Jyotiraditya Scindia joins Bharatiya Janata Party (BJP), in presence of BJP President JP Nadda https://t.co/xBIMuF4CKZ
— ANI (@ANI) March 11, 2020