Connect with us

Dvgsuddi Kannada | online news portal | Kannada news online

ಶೋಭಾ ಕರಂದ್ಲಾಜೆ ವಿರುದ್ಧ ಕೇಸ್ ದಾಖಲಿಸಿದ ಕೇರಳ ಸರ್ಕಾರ 

ಪ್ರಮುಖ ಸುದ್ದಿ

ಶೋಭಾ ಕರಂದ್ಲಾಜೆ ವಿರುದ್ಧ ಕೇಸ್ ದಾಖಲಿಸಿದ ಕೇರಳ ಸರ್ಕಾರ 

ಡಿವಿಜಿ ಸುದ್ದಿ, ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿದಕ್ಕೆ ಕೇರಳದ ಮಲ್ಲಪುರಮ್‌ನಲ್ಲಿ ಹಿಂದೂ ಕುಟುಂಬಗಳಿಗೆ ನೀರು ಪೂರೈಕೆ ಸ್ಥಗಿತಗೊಳಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಮಾಡಿರುವ  ಟ್ವೀಟ್  ಮಾಡಿದ್ದಕ್ಕೆ ಕೇರಳ ಸರ್ಕಾರ ಕೇಸ್ ದಾಖಲಿಸಿದೆ.

ಮಲ್ಲಪುರಂ ನಿವಾಸಿ ಸುಭಾಷ್‌ ಚಂದ್ರನ್‌ ಕೆ.ಆರ್‌  ಪೊಲೀಸರಿಗೆ ನೀಡಿರುವ  ದೂರು ಆಧಾರದಲ್ಲಿ ಕೇರಳ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಬುಧವಾರ ಈ ಕುರಿತು ಟ್ವೀಟ್‌ ಮಾಡಿದ್ದ ಶೋಭಾ ಕರಂದ್ಲಾಜೆ, ಕೇರಳ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು.

‘ಕೇರಳ ಸರ್ಕಾರ ಮತ್ತೊಂದು ಕಾಶ್ಮೀರವಾಗುವುದರತ್ತ ಹೆಜ್ಜೆಇಡುತ್ತಿದೆ. ಮಲ್ಲಪುರಂ ಜಿಲ್ಲೆಯ ಕುಟ್ಟಿಪುರಮ್‌ ಪಂಚಾಯಿತಿಯ  ಹಿಂದೂ ಕುಟುಂಬಗಳು ಸಿಎಎ ಬೆಂಬಲಿಸಿದವು ಎಂಬ ಕಾರಣಕ್ಕೆ ನೀರು ಪೂರೈಕೆ ಸ್ಥಗಿತಗೊಳಿಸಲಾಗಿದೆ. ದೇವರ ಸ್ವಂತ ನಾಡಿನ  ಈ ಅಸಹಿಷ್ಣುತೆಯನ್ನು ಮಾಧ್ಯಮಗಳು ಪ್ರಸಾರ ಮಾಡಬಲ್ಲವೇ? ಎಂದು ಅವರು ಪ್ರಶ್ನೆ ಮಾಡಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top