ನವದೆಹಲಿ: ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪದಲ್ಲಿ ಇದುವರೆಗೆ ಒಂದೇ ಒಂದು ಕೊರೊನಾ ವೈರಸ್ ಸೋಂಕು ಪತ್ತೆಯಾಗಿಲ್ಲ. ಇನ್ನು ಅರುಣಾಚಲ ಪ್ರದೇಶ ದೇಶದಲ್ಲಿಯೇ ಮೊದಲ ಕೊರೊನಾ ಮುಕ್ತ ರಾಜ್ಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ, ಲಕ್ಷದ್ವೀಪದಲ್ಲಿ ಕೊರೊನಾ ಸೋಂಕು ಪತ್ತೆಯಾಗಿಲ್ಲ. ಭಾರತದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದು ಸುಮಾರು 1.38 ಲಕ್ಷ ಜನರಿಗೆ ಸೋಂಕು ತಗುಲಿದೆ. ಆದರೆ ಲಕ್ಷದ್ವೀಪದಲ್ಲಿ ಇಲ್ಲಿಯವರೆಗೂ ಕೊರೊನಾ ಸೋಂಕು ಪತ್ತೆಯಾಗಿಲ್ಲ. 35 ಸಣ್ಣ ಸಣ್ಣ ದ್ವೀಪಗಳಿರುವ ಲಕ್ಷದ್ವೀಪ 64 ಸಾವಿರ ಜನಸಂಖ್ಯೆ ಹೊಂದಿದೆ.
ಇನ್ನು ಅರುಣಾಚಲ ಪ್ರದೇಶ ರಾಜ್ಯ ಮಾತ್ರ ದೇಶ ಮಾತ್ರ ಮೊದಲ ಕೊರೊನಾ ಮುಕ್ತ ರಾಜ್ಯವಾಗಿದೆ. ಕಳೆದ ಏಪ್ರಿಲ್ ತಿಂಗಳಲ್ಲಿ ಒಬ್ಬರಿಗೆ ಸೋಂಕು ತಗುಲಿತ್ತು. ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೂ ಯಾವುದೇ ಹೊಸ ಸೋಂಕು ಪತ್ತೆಯಾಗಿಲ್ಲ.



