Connect with us

Dvgsuddi Kannada | online news portal | Kannada news online

ಆರ್ ಬಿಐನಿಂದ ಗುಡ್ ನ್ಯೂಸ್: ಮತ್ತೆ ಮೂರು ತಿಂಗಳು ಇಎಂಐ ಕಟ್ಟುವಂತಿಲ್ಲ

ಪ್ರಮುಖ ಸುದ್ದಿ

ಆರ್ ಬಿಐನಿಂದ ಗುಡ್ ನ್ಯೂಸ್: ಮತ್ತೆ ಮೂರು ತಿಂಗಳು ಇಎಂಐ ಕಟ್ಟುವಂತಿಲ್ಲ

ನವದೆಹಲಿ: ಕೊರೊನಾ ಲಾಕ್‍ಡೌನ್‍ನಿಂದ  ದೇಶವೇ ಆರ್ಥಿಕ ಸ್ಥಿತಿ ಸಂಕಷ್ಟದಲ್ಲಿದೆ.  ಈ ಸಂದರ್ಭದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಸಾಲದ ಮೇಲಿನ ಬಡ್ಡಿ ದರವನ್ನು ಇಳಿಕೆ ಮಾಡಿದೆ. ಇದರ ಜೊತೆಗೆ ಸಾಲದ ಮೇಲಿನ ಕಂತು ಕುಟ್ಟುವ ಅವಧಿಯನ್ನು (ಇಎಂಐ)  ಮತ್ತೆ ಮೂರು ತಿಂಗಳ ಕಾಲ ವಿಸ್ತರಿಸಿದೆ.  ಆಗಸ್ಟ್ 31ರವರೆಗೆ ಇಎಂಐ ಅವಧಿಯನ್ನು ವಿಸ್ತರಣೆ ಮಾಡಿದೆ ಆದೇಶ ಹೊರಡಿಸಿದೆ.

ಆರ್‌ಬಿಐ ಮುಖ್ಯಸ್ಥ ಶಕ್ತಿಕಾಂತ್ ದಾಸ್ ಸುದ್ದಿಗೋಷ್ಠಿ ನಡೆಸಿ, ಆರ್‌ಬಿಐ ರೆಪೋ ದರ 40 ಬೇಸಿಸ್ ಅಂಕದಷ್ಟು ಕಡಿತ ಮಾಡಿದೆ. ಈ ಮೂಲಕ ಶೇ. 4.4ರಿಂದ ಶೇ.4ಕ್ಕೆ ಇಳಿಕೆಯಾಗಿದೆ‌. ಇದರರಿಂದ ಗೃಹ ಸಾಲ, ವಾಹನ ಸಾಲ, ವೈಯಕ್ತಿಕ ಸಾಲದ ಮೇಲಿನ ಬಡ್ಡಿ ಇಳಿಕೆ ಮಾಡಿದೆ. ರಿಸರ್ವ್ ರೆಪೋ ದರ ಶೇ.3.35ಕ್ಕೆ ಇಳಿಕೆ ಮಾಡಿದೆ. ರಿಸರ್ವ್ ರೆಪೋ ದರ ಶೇ. 3.35 ಇಳಿಕೆಯಿಂದ ಬ್ಯಾಂಕುಗಳಿಗೆ ಪ್ರಯೋಜನವಾಗಲಿದೆ.

ಕೇಂದ್ರ ಸರ್ಕಾರವು 20 ಲಕ್ಷ ಕೋಟಿ ರೂಪಾಯಿ ಮೊತ್ತದ ಆರ್ಥಿಕ ಪ್ಯಾಕೇಜ್ ಫೋಷಿಸಿದ ನಂತರ ಇದೇ ಮೊದಲ ಬಾರಿಗೆ ಆರ್‌ಬಿಐ ಗವರ್ನರ್ ಸುದ್ದಿಗೋಷ್ಠಿ ಮಾಹಿತಿ  ನೀಡಿದ್ದಾರೆ.

ವಾಣಿಜ್ಯ ಬ್ಯಾಂಕುಗಳು ಆರ್‌ಬಿಐನಿಂದ ಪಡೆಯುವ ಅಲ್ಪಾವಧಿ ಸಾಲದ ಮೇಲಿನ ಬಡ್ಡಿದರಕ್ಕೆ ರೆಪೋ ದರ ಎಂದು ಕರೆಯಲಾಗುತ್ತದೆ. ರೆಪೋ ದರ ಕಡಿಮೆಯಾದರೆ ಬ್ಯಾಂಕ್ ಗಳು ಕಡಿಮೆ ಬಡ್ಡಿ ದರದಲ್ಲಿ ಹೆಚ್ಚು ಹಣವನ್ನು ಪಡೆಯಬಹುದು. ವಾಣಿಜ್ಯ ಬ್ಯಾಂಕುಗಳು ಆರ್‌ಬಿಐನಲ್ಲಿ ಇಡುವ ಠೇವಣಿಗಳ ಮೊತ್ತವೇ ರಿವರ್ಸ್ ರೆಪೋ .ಆರ್‌ಬಿಐನಲ್ಲಿ ಠೇವಣಿ ಇಡುವುದು ಬ್ಯಾಂಕುಗಳಿಗೆ ಸುರಕ್ಷಿತ. ರಿವರ್ಸ್ ರೆಪೋ ದರ ಹೆಚ್ಚಾದಾಗ ಬ್ಯಾಂಕುಗಳು ಹೆಚ್ಚಿನ ಮೊತ್ತವನ್ನು ಆರ್‌ಬಿಐಗೆ ವರ್ಗಾಯಿಸಬೇಕಾಗುತ್ತದೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top