ಅಹಮದಾಬಾದ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆ. 24ರಂದು ಭಾರತಕ್ಕೆ ಆಗಮಿಸಲಿದ್ದು, ಗುಜರಾತಿನ ಅಹಮದಾಬಾದ್ ನಗರಕ್ಕೆ ಭೇಟಿ ನೀಡಲಿದ್ದಾರೆ. ಅವರ ಸುರಕ್ಷತೆಗಾಗಿ 10 ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಅಹಮದಾಬಾದ್‌ನ ಡಿಸಿಪಿ ವಿಜಯ್ ಪಟೇಲ್ ತಿಳಿಸಿದು.
ಎಸ್‌ಪಿಜಿ, ಎನ್‌ಎಸ್‌ಜಿ ಹಾಗೂ ಇತರ ವಿಶೇಷ ರಕ್ಷಣಾ ಪಡೆಗಳ ಸಿಬ್ಬಂದಿಯೂ ರಕ್ಷಣಾ ಕಾರ್ಯದಲ್ಲಿ ತೊಡಗಿರುತ್ತಾರೆ . ಅಮೆರಿಕದ ಅಧ್ಯಕ್ಷರೊಬ್ಬರು ಇದೇ ಮೊದಲ ಬಾರಿಗೆ ಗುಜರಾತ್‌ಗೆ ಬರುತ್ತಿದ್ದು, ಈ ಅಪರೂಪದ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು.
ಟ್ರಂಪ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಅಹಮದಾಬಾದ್ ವಿಮಾನ ನಿಲ್ದಾಣದಿಂದ ಗಾಂಧಿ ಆಶ್ರಮದವರೆಗೆ ಮತ್ತು ಅಲ್ಲಿಂದ ಮೊಟೆರಾ ಕ್ರೀಡಾಂಗಣದವರೆಗೆ ರೋಡ್‌ಶೋ ನಡೆಸುವರು. 700 ಕೋಟಿ ವೆಚ್ಚದ ಕ್ರಿಕೆಟ್ ಕ್ರೀಡಾಂಗಣವನ್ನು ಉದ್ಘಾಟಿಸುವರು ಎಂದು ತಿಳಿಸಿದರು.