Connect with us

Dvgsuddi Kannada | online news portal | Kannada news online

ದೆಹಲಿಯಲ್ಲಿ ಶಂಕಿತ ಉಗ್ರನ ಬಂಧನ

ರಾಷ್ಟ್ರ ಸುದ್ದಿ

ದೆಹಲಿಯಲ್ಲಿ ಶಂಕಿತ ಉಗ್ರನ ಬಂಧನ

ನವದೆಹಲಿ: ದೇಶದಲ್ಲಿ ಉಗ್ರರ  ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ಶಂಕಿತ ಐಸಿಸ್ ಆಪರೇಟಿವ್‍ನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ರಾತ್ರಿ ನಡೆದ ಸಣ್ಣ ಪ್ರಮಾಣದ ಗುಂಡಿನ ಚಕಮಕಿ ಬಳಿಕ ಪೊಲೀಸರು ಉಗ್ರನನ್ನು ಬಂಧಿಸಿದ್ದಾರೆ.

ಆರೋಪಿ ಅಬು ಯುಸುಫ್‍ನನ್ನು ಬಂಧಿಸಿದ್ದು, ಎರಡು ಸುಧಾರಿತ ಸ್ಫೋಟಕ(ಐಇಡಿ)ಗಳು ಹಾಗೂ ಒಂದು ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ. ಈತ ಒಂಟಿಯಾಗಿ ದಾಳಿ ನಡೆಸಲು ಸಂಚು ರೂಪಿಸಿದ್ದನು ಎಂದು ದೆಹಲಿಯ ವಿಶೇಷ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ.  ಐಇಡಿಗಳನ್ನು ಕುಕ್ಕರ್ ನಲ್ಲಿ ಅಡಿಗಿಸಿಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಡಿಸಿಪಿ ಪ್ರಮೋದ್ ಸಿಂಗ್ ಕುಶ್ವಾಹ್ ಮಾಹಿತಿ ನೀಡಿದ್ದು, ಶಂಕಿತ ಉಗ್ರ ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಸ್ಥಳಗಳಿಗೆ ಭೇಟಿ ನೀಡಿದ್ದು, ಏಕಾಂಗಿಯಾಗಿ ದಾಳಿ ನಡೆಸಲು ಸಂಚು ರೂಪಿಸಿದ್, ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದರು.

ಧೌಲಾ ಕುವಾನ್ ಬಳಿ ಘಟನೆ ನಡೆದಿದ್ದು, ಸಣ್ಣ ಪ್ರಮಾಣದ ಗುಂಡಿನ ಚಕಮಕಿ ಬಳಿಕ ಉಗ್ರನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಐಸಿಸ್ ಜೊತೆ ಸಂಪರ್ಕ ಹೊಂದಿದ್ದ ವೈದ್ಯನನ್ನು ಬೆಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ) ಬಂಧಿಸಿತ್ತು. ಇದಾದ ಬಳಿಕ ಇದೀಗ ದೆಹಲಿಯಲ್ಲಿ ಸಹ ಓರ್ವ ಉಗ್ರನನ್ನು ಬಂಧಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top