ದೆಹಲಿ: ದೆಹಲಿಯ ತಿಹಾರ್ ಜೈಲಿನಲ್ಲಿ ಇಂದು ಬೆಳಗ್ಗೆ 5.30ಕ್ಕೆ ನಿರ್ಭಯಾ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಲಾಯಿತು. ಮರಣ ದಂಡನೆಗೆ ಒಳಗಾಗುವ ಮುನ್ನ ಅಂತಿಮ ಇಚ್ಛೆ ಯನ್ನು ಯಾರೊಬ್ಬರು ವ್ಯಕ್ತಪಡಿಸಿಲ್ಲ.
ಮುಕೇಶ್ ಸಿಂಗ್ (32), ಪವನ್ ಗುಪ್ತಾ (25), ವಿನಯ್ ಶರ್ಮಾ (26) ಮತ್ತು ಅಕ್ಷಯ್ ಕುಮಾರ್ ಸಿಂಗ್ (31) ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಇಂದು ಗಲ್ಲಿಗೇರಿಸಲಾಯಿತು.
2012 ಡಿಸೆಂಬರ್ 16ರಂದು ದೆಹಲಿಯಲ್ಲಿ ಚಲಿಸುತ್ತಿದ್ದ ಬಸ್ಸಿನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಹತ್ಯೆ ಮಾಡಿದ ಪ್ರಕರಣದಲ್ಲಿ ಇವರಿಗೆ ಮರಣ ದಂಡನೆ ವಿಧಿಸಲಾಗಿದೆ. ಅತ್ಯಾಚಾರಕ್ಕೊಳಗಾದ ಯುವತಿಯು 13 ದಿನಗಳ ನಂತರ ಸಾವಿಗೀಡಾಗಿದ್ದಳು. ಅಪರಾಧಿಗಳಿಗೆ ಗಲ್ಲು ಶಿಕ್ಷೆ ತೀರ್ಪು ಪ್ರಕಟವಾಗಿದ್ದರೂ ಜನವರಿ ತಿಂಗಳಿನಿಂದ ಮೂರು ಬಾರಿ ಗಲ್ಲಿಗೇರಿಸುವ ದಿನಾಂಕ ಬದಲಾಗಿತ್ತು.



