ಪ್ರಮುಖ ಸುದ್ದಿ
ಇಂದು ಸಂಜೆ 4 ಗಂಟೆಗೆ 20 ಲಕ್ಷ ಕೋಟಿ ಪ್ಯಾಕೇಜ್ ಮಾಹಿತಿ ನೀಡಲಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಘೋಷಿಸಿದ್ದ 20 ಲಕ್ಷ ಕೋಟಿ ಮೊತ್ತದ ಆರ್ಥಿಕ ಪ್ಯಾಕೇಜ್‌ನ ವಿವರವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಜೆ 4 ಗಂಟೆಗೆ ಹಂಚಿಕೊಳ್ಳಲಿದ್ದಾರೆ.
Finance Minister Smt. @nsitharaman will address a Press Conference today, 13th May 2020, at 4 PM in New Delhi.#EconomicPackage#AatmanirbharBharat #AatmaNirbharBharatAbhiyan #IndiaFightsCorona pic.twitter.com/FmKcItA23C
— Ministry of Finance 🇮🇳 #StayHome #StaySafe (@FinMinIndia) May 13, 2020
ದೇಶವನ್ನು ಉದ್ದೇಶಿಸಿ ನಿನ್ನೆ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಕೊರೊನಾ ವೈರಸ್ ತಡೆಯಲು ಘೋಷಿಸಿದ್ದ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾಗಿದ್ದ ಆರ್ಥಿಕ ಪುನಶ್ಚೇತನ ಮತ್ತು ಬಡವರಿಗೆ ನೆರವಾಗಲು ಪ್ರಧಾನಿ ಮೋದಿ ಅವರು 20 ಲಕ್ಷ ಕೋಟಿ ಮೊತ್ತದ ವಿಶೇಷ ಪ್ಯಾಕೇಜ್ ಘೋಷಿಸಿದ್ದರು. ತಮ್ಮ ಭಾಷಣದಲ್ಲಿಯೇ ಪ್ಯಾಕೇಜ್ ವಿವರಗಳನ್ನು ಹಣಕಾಸು ಸಚಿವರು ಹಂಚಿಕೊಳ್ಳಲಿದ್ದಾರೆ ಎಂದು ಹೇಳಿದ್ದರು.
ಪ್ರಧಾನಿ ಭಾಷಣದ ನಂತರ ಸರಣಿ ಟ್ವೀಟ್ ಮಾಡಿದ್ದ ಹಣಕಾಸು ಸಚಿವರು, ಇದು ಕೇವಲ ಪ್ಯಾಕೇಜ್ ಅಲ್ಲ, ಆರ್ಥಿಕ ಸ್ಥಿತಿ ಸುಧಾರಣೆಗೆ ಮುನ್ನುಡಿ ಆಗಲಿದೆ ಎಂದಿದ್ದಾರೆ. ಪ್ರಧಾನಿ ಘೋಷಿಸಿದ ಆತ್ಮನಿರ್ಭರ ಭಾರತ ಅಭಿಯಾನವು ಬೀದಿ ವ್ಯಾಪಾರಿಗಳು, ಸಣ್ಣ ಮತ್ತು ಮಧ್ಯಮ ಉದ್ಯಮಿಗಳು, ಪ್ರಾಮಾಣಿಕವಾಗಿ ತೆರಿಗೆ ಪಾವತಿಸುವ ಮಧ್ಯಮ ವರ್ಗ, ತಯಾರಿಕೆದಾರರು ಸೇರಿದಂತೆ ಎಲ್ಲರನ್ನೂ ಒಳಗೊಳ್ಳಲಿದೆ ಎಂದು ಹೇಳಿದ್ದಾರೆ.
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
ಈ ರಾಶಿಯವರಿಗೆ ಎಷ್ಟೇ ಪ್ರಯತ್ನಿಸದರೂ ಮದುವೆ ಯೋಗ ಬರುತ್ತಿಲ್ಲ, ಈ ರಾಶಿಯ ಸಿರಿ ಧಾನ್ಯ ವ್ಯಾಪಾರಿಸ್ತರಿಗೆ ಲಾಭ ಇಲ್ಲ, ಶನಿವಾರದ ರಾಶಿ...
ಈ ರಾಶಿಯವರು ಯೋಚಿಸಿರುವ ಕೆಲಸದಲ್ಲಿ ಜಯ, ಈ ರಾಶಿಯವರಿಗೆ ಸರಕಾರಿ ಉದ್ಯೋಗ ಪ್ರಾಪ್ತಿ, ಶುಕ್ರವಾರದ ರಾಶಿ ಭವಿಷ್ಯ 01 ಆಗಸ್ಟ್ 2025...
ಈ ರಾಶಿಯವರಿಗೆ ಕುಟುಂಬ ಕಲಹಗಳಿಂದ ಮುಕ್ತಿ ಸಿಗುವುದು! ಈ ರಾಶಿಯವರು ಇಷ್ಟಪಟ್ಟವರ ಜೊತೆ ಮದುವೆ ಗ್ಯಾರಂಟಿ. ಗುರುವಾರದ ರಾಶಿ ಭವಿಷ್ಯ 31...
ದಾವಣಗೆರೆ: ಬೆಂಗಳೂರಿನ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ 10 ಖಾಯಂ ಚಾಲಕ ಹುದ್ದೆಗಳಿಗಾಗಿ 43 ವರ್ಷದೊಳಗಿನ ಶೇಪ್-1 ಮೆಡಿಕಲ್ ಕ್ಯಾಟಗೆರಿ ಹೊಂದಿರುವ...
ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರವು (arecanut rate) ಕಳೆದ ಒಂದು ತಿಂಗಳಿಂದ ಸ್ಥಿರತೆ ಕಾಯ್ದುಕೊಂಡು ಬಂದಿದೆ. ಜುಲೈ...