ನವದೆಹಲಿ: ಭಾರತ–ಚೀನಾ ಗಡಿ ಸಂಘರ್ಷದಲ್ಲಿ ಭಾರತೀಯ ಸೇನೆ ಅಧಿಕಾರಿ ಸೇರಿ ಇಪ್ಪತ್ತು ಯೋಧರು ಹುತಾತ್ಮರಾದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ತಡ ರಾತ್ರಿ ವರಗೆ ಉನ್ನತಮಟ್ಟದ ಸಭೆ ನಡೆಸಿದ್ದಾರೆ.
ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಜೈಶಂಕರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಭಾರತೀಯ ಸೇನೆಯ ಮುಖ್ಯಸ್ಥ ಎಂಎಂ ನರವಣೆ ಅವರು ಮಹತ್ವದ ಸಭೆ ನಡೆಸಿದ್ದಾರೆ.
ಮುಂದಿನ ಬೆಳವಣಿಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ ಎನ್ನಲಾಗಿದೆ. ಚೀನಾದ 43 ಯೋಧರು ಮೃತಪಟ್ಟಿದ್ದಾರೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಅಮೆರಿಕಾ ಮಾಧ್ಯಮಗಳು ಚೀನಾದ 35 ಸೈನಿಕರು ಮೃತಪಟ್ಟಿದ್ದಾರೆ ಎಂದು ವರದಿ ಮಾಡಿವೆ.



