ನವದೆಹಲಿ: ಕೊರೊನಾ ವೈರಸ್ ಭೀತಿಯಿಂದ ದೇಶದಾದ್ಯಂತ ಲಾಕ್ ಡೌನ್ ಮಾಡಿದ್ದಕ್ಕೆ ಜನ ಸಾಮಾನ್ಯರಿಗೆ ತೊಂದರೆಯಾಗಿದೆ. ಅದರಲ್ಲೂ ಬಡ ಜನರಿಗೆ ತೀವ್ರ ತೊಂದರೆ ಉಂಟುಮಾಡಿದೆ. ದೇಶದ ಜನರ ಮೇಲೆ ಲಾಕ್‍ಡೌನ್ ನಂತಹ ಕಠಿಣ ಕ್ರಮಗಳನ್ನು ಕೈಗೊಂಡಿದ್ದಕ್ಕಾಗಿ ಕ್ಷಮೆಯಾಚಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಕೊರೊನಾ ವಿಚಾರದ ಕುರಿತು ಮನ್ ಕಿ ಬಾತ್‍ನಲ್ಲಿ ಮಾತನಾಡಿದ ಅವರು, ದೇಶಾದ್ಯಂತ ಲಾಕ್‍ಡೌನ್ ಘೋಷಣೆ ಮಾಡಿದ್ದಕ್ಕೆ ಕೆಲವರು ನನ್ನ ಮೇಲೆ ಕೋಪಗೊಂಡಿದ್ದಾರೆ. ಬಡವರಿಗೆ ಇದರಿಂದ ಸಮಸ್ಯೆಯಾಗಿದೆ ಎನ್ನುವುದು ನನಗೆ ಗೊತ್ತಾಗಿದೆ. ಆದರೆ , ಯುದ್ಧವನ್ನು ಗೆಲ್ಲಲು ಇಂತಹ ಕಠಿಣ ಕ್ರಮಗಳು ಅಗತ್ಯವಾಗಿತ್ತು.ದೇಶದ ಎಲ್ಲರ ರಕ್ಷಣೆಗಾಗಿ ಈ ಕಠಿಣ ನಿರ್ಧಾರ ಕೈಗೊಳ್ಳಬೇಕಾಯಿತು ಎಂದಿದ್ದಾರೆ.
I apologize for taking these harsh steps which have caused difficulties in your lives, especially the poor people. I know some of you would be angry with me also. But these tough measures were needed to win this battle: PM Narendra Modi #MannKiBaat (file pic) pic.twitter.com/fwGlUk5ubz
— ANI (@ANI) March 29, 2020
ದೇಶದ ಜನರನ್ನು ಸುರಕ್ಷಿತವಾಗಿಡುವುದು ಸರ್ಕಾರದ ಮುಖ್ಯ ಉದ್ದೇಶ. ಯಾರೂ ಉದ್ದೇಶಪೂರ್ವಕವಾಗಿ ಲಾಕ್‍ಡೌನ್ ಘೋಷಣೆಯನ್ನು ಮುರಿಯಲು ಬಯಸುವುದಿಲ್ಲ ಎಂದು ನಂಬಿಕೆ ಹೊಂದಿದ್ದೇನೆ. ಆದರೆ ಕೆಲವರು ಲಾಕ್‍ಡೌನ್ ನಡುವೆಯೂ ಮನೆಯಿಂದ ಹೊರಗೆ ಬರುತ್ತಿದ್ದಾರೆ. ಅಂತವರಿಂದ ಕೊರೊವಾ ವೈರಸ್ ಮತ್ತಷ್ಟು ಹೆಚ್ಚಾಗುತ್ತಿದ್ದು, ನಮ್ಮನ್ನು ರಕ್ಷಿಸಿಕೊಳ್ಳುವುದು ಕಷ್ಟವಾಗುತ್ತದೆ ಎಂದು ಹೇಳಿದರು.
ಕೊರೊನಾ ವೈರಸ್ ವಿರುದ್ಧ ಹೋರಾಡುವ ನಮ್ಮ ಸಹೋದರ, ಸಹೋದರಿಯರಾದ ದಾದಿಯರು, ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿ ನಮಗಾಗಿ ಯೋಧರ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನೀವು ಅವರ ಸೇವೆ, ತ್ಯಾಗವನ್ನು ಅರ್ಥ ಮಾಡಿಕೊಂಡು ಸ್ಪಂದಿಸಬೇಕು ಎಂದಿದ್ದಾರೆ.



