ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಳವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
Addressing the 90th birthday celebrations of The Most Rev. Dr. Joseph Mar Thoma Metropolitan. https://t.co/9AUWwJgqZd
— Narendra Modi (@narendramodi) June 27, 2020
ರೆವೆರೆಂಡ್ ಡಾ. ಜೋಸೆಫ್ ಮರ್‌ಥೊಮಾ ಅವರ 90ನೇ ಜನ್ಮದಿನಾಚರಣೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ಕೊರೊನಾ ವಿರುದ್ಧದ ಹೋರಾಟದಲ್ಲಿ ಬೇರೆ ದೇಶಗಳಿಗಿಂತ ಭಾರತ ಉತ್ತಮ ಸ್ಥಿತಿಯಲ್ಲಿದೆ ಎಂದರು.
ಕೊರೊನಾ ವೈರಸ್ ಭಾರತದಲ್ಲಿ ದೊಡ್ಡ ಪ್ರಮಾಣದ ಪರಿಣಾಮವಾಗಲಿದೆ ಎಂದು ಅನೇಕ ಹೇಳಿದ್ದರು. ಆದರೆ, ದೇಶದಾದ್ಯಂತ ಲಾಕ್‌ಡೌನ್, ಸರ್ಕಾರದ ಮಾರ್ಗ ಸೂಚಿ ಮತ್ತು ಜನರ ಸಹಕಾರದಿಂದಾಗಿ ಕೊರೊನಾ ನಿಯಂತ್ರಣಕ್ಕೆ ಬರುತ್ತಿದೆ.
ದೇಶದಲ್ಲಿ 8 ಕೋಟಿ ಕುಟುಂಬಗಳಿಗೆ ಉಚಿತ ಅಡುಗೆ ಅನಿಲದ ಸಂಪರ್ಕ ಕಲ್ಪಿಸಲಾಗಿದ್ದು, 1.5 ಕೋಟಿ ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ಆಯುಷ್ಮಾನ್ ಭಾರತ್ ಮೂಲಕ ಜನರಿಗೆ ಆರೋಗ್ಯ ಸೇವೆ ಒದಗಿಸಲಾಗುತ್ತಿದೆ ಎಂದು ಪ್ರಧಾನಿ ಅವರು ಹೇಳಿದರು.



