ನವದೆಹಲಿ: ಕೊರೊನಾದಿಂದ ಸಂಕಷ್ಟದಲ್ಲಿರುವ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ನಿರ್ಧಾರ ಘೋಷಣೆ ಮಾಡಿದ್ದು, ನವೆಂಬರ್ ಅಂತ್ಯದ ವರೆಗೆ ಉಚಿತ ಪಡಿತರ ನೀಡುವುದಾಗಿ ಹೇಳಿದ್ದಾರೆ.
Addressing the nation. https://t.co/7urZ7A7nPu
— Narendra Modi (@narendramodi) June 30, 2020
ಇಂದು ಸಂಜೆ ದೇಶ ಉದ್ದೇಶಿಸಿ ಭಾಷಣ ಮಾಡಿದ ಅವರು, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಮತ್ತು ಇತರ ಯೋಜನೆ ಅಡಿ ದೇಶದ 80 ಕೋಟಿ ಜನರಿಗೆ ಉಚಿತ ಪಡಿತರ ಜೊತೆಗೆ ಒಂದು ಕೆಜಿ ಬೇಳೆಯನ್ನು ನವೆಂಬರ್ ತಿಂಗಳ ವರೆಗೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು.
ಇದಕ್ಕಾಗಿ ಕೇಂದ್ರ ಸರ್ಕಾರ 2 ಲಕ್ಷ ಕೋಟಿ ವ್ಯಯಿಸುತ್ತಿದೆ. ಎಲ್ಲರಿಗೂ ಒಂದೇ ರೇಷನ್ ಕಾರ್ಡ್ ಕೊಡುವ ಒಂದು ದೇಶ, ಒಂದು ರೇಷನ್ ಕಾರ್ಡ್ ಯೋಜನೆಯನ್ನು ಶೀಘ್ರ ಜಾರಿ ಮಾಡುತ್ತೇವೆ ಎಂದು ಹೇಳಿದರು.ಬಡವರ ಜೊತೆಗೆ ದೇಶದ ಎಲ್ಲ ರೈತರು ಮತ್ತು ತೆರಿಗೆ ಪಾವತಿದಾರರನ್ನು ನಮಿಸುತ್ತೇನೆ. ನಾವು ಸತತ ಕೆಲಸ ಮಾಡುತ್ತೇವೆ. ಆರ್ಥಿಕ ಚಟುವಟಿಕೆಗಳನ್ನು ಇನ್ನಷ್ಟು ಉತ್ತಮಗೊಳಿಸಬೇಕಿದೆ. ಆತ್ಮ ನಿರ್ಭರ್ ಭಾರತ ನಿರ್ಮಿಸಲು ಹಗಲಿರುಳು ಶ್ರಮಿಸುತ್ತೇವೆ. ಮಾಸ್ಕ್ ಧರಿಸುವುದನ್ನು ಮರೆಯಬೇಡಿ, ಅಂತರ ಕಾಪಾಡಿಕೊಳ್ಳಿ ಎಂದು ಜನರಲ್ಲಿ ಮನವಿ ಮಾಡಿದರು.



