ನವದೆಹಲಿ: ಏ. 27ರಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.
ಕೊರೊನಾ ವೈರಸ್ ನಿಯಂತ್ರಣ ಮತ್ತು ಸೋಂಕು ತಡೆಗಟ್ಟಲು ಜಾರಿಯಲ್ಲಿರುವ ಲಾಕ್‌ಡೌನ್ ಪರಿಣಾಮಗಳ ಬಗ್ಗೆ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ಚರ್ಚೆ ನಡೆಸಲಿದ್ದಾರೆ.
ಈ ವಿಚಾರಗಳಿಗೆ ಸಂಬಂಧಿಸಿದಂತೆ ಪ್ರಧಾನಿ ಅವರು ಈಗಾಗಲೇ ಎರಡು ಸಲ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಮಾರ್ಚ್ 20, 24ರಂದು ಎಲ್ಲ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಲಾಕ್ ಡೌನ್ ಕುರಿತು ಚೆರ್ಚೆ ನಡೆಸಿದ್ದರು.