ಭೋಪಾಲ್: 22 ಶಾಸಕರ ರಾಜೀನಾಮೆಯಿಂದ ಅಲ್ಪ ಮತಕ್ಕೆ ಕುಸಿದಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲನಾಥ್ ನೇತೃತ್ವದ ಸರ್ಕಾರಕ್ಕೆ ನಾಳೆಯೇ ವಿಶ್ವಾಸಮತ ಸಾಬೀತು ಪಡಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ನೇತೃತ್ವದಲ್ಲಿ ಬಿಜೆಪಿಯ 106 ಶಾಸಕರು ರಾಜ್ಯಪಾಲರನ್ನು ಭೇಟಿ ಮಾಡಿ, ಕಾಂಗ್ರೆಸ್ ಪಕ್ಷದ 22 ಶಾಸಕರು ರಾಜಿನಾಮೆ ನೀಡಿದ್ದು ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ. ಹೀಗಾಗಿ ವಿಶ್ವಾಸಮತಯಾಚನೆಯಾಗಬೇಕು. ಇಲ್ಲದಿದ್ದರೆ ಕುದುರೆ ವ್ಯಾಪಾರ ನಡೆಯುವ ಸಾಧ್ಯತೆಗಳಿವೆ ಎಂದು ಮನವಿ ಮಾಡಿದ್ದರು.
#MadhyaPradesh Governor Lalji Tandon, writes to CM Kamal Nath, stating 'Conduct the floor test on 17th March otherwise it will be considered that you actually don't have the majority in the state assembly.' pic.twitter.com/TvGx4PTr5r
— ANI (@ANI) March 16, 2020
ಈ ಹಿನ್ನೆಲೆಯಲ್ಲಿ ರಾಜ್ಯಪಾಲ ಲಾಲ್ ಜೀ ಟಂಡನ್ ಅವರು ನಾಳೆಯೇ ವಿಶ್ವಾಸಮತ ಸಾಬೀತು ಪಡಿಸುವಂತೆ ಕಮಲನಾಥ್ ಸರ್ಕಾರಕ್ಕೆ ಸೂಚಿಸಿದ್ದಾರೆ. ಇದಕ್ಕೂ ಮುನ್ನ ರಾಜ್ಯಪಾಲರು ಹಾಗೂ ಸ್ಪೀಕರ್ ಜಂಟಿಯಾಗಿ ಅಧಿವೇಶನದಲ್ಲಿ ಪಾಲ್ಗೊಂಡು ವಿಧಾನಸಭೆಯ ಕಲಾಪಗಳನ್ನು ಮಾರ್ಚ್ 26ಕ್ಕೆ ಮುಂದೂಡಿದ್ದರು.



