Connect with us

Dvg Suddi-Kannada News

ಮಧ್ಯಪ್ರದೇಶ ಸರ್ಕಾರಕ್ಕೆ ನಾಳೆಯೇ ವಿಶ್ವಾಸಮತ ಸಾಬೀತು ಪಡಿಸಲು ಡೆಡ್ ಲೈನ್

ಪ್ರಮುಖ ಸುದ್ದಿ

ಮಧ್ಯಪ್ರದೇಶ ಸರ್ಕಾರಕ್ಕೆ ನಾಳೆಯೇ ವಿಶ್ವಾಸಮತ ಸಾಬೀತು ಪಡಿಸಲು ಡೆಡ್ ಲೈನ್

ಭೋ‍‍ಪಾಲ್:  22 ಶಾಸಕರ ರಾಜೀನಾಮೆಯಿಂದ ಅಲ್ಪ ಮತಕ್ಕೆ ಕುಸಿದಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲನಾಥ್ ನೇತೃತ್ವದ ಸರ್ಕಾರಕ್ಕೆ ನಾಳೆಯೇ ವಿಶ್ವಾಸಮತ ಸಾಬೀತು ಪಡಿಸುವಂತೆ  ರಾಜ್ಯಪಾಲರು ಸೂಚಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರ ನೇತೃತ್ವದಲ್ಲಿ ಬಿಜೆಪಿಯ 106 ಶಾಸಕರು ರಾಜ್ಯಪಾಲರನ್ನು ಭೇಟಿ ಮಾಡಿ,  ಕಾಂಗ್ರೆಸ್‌ ಪಕ್ಷದ 22 ಶಾಸಕರು ರಾಜಿನಾಮೆ ನೀಡಿದ್ದು ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ. ಹೀಗಾಗಿ ವಿಶ್ವಾಸಮತಯಾಚನೆಯಾಗಬೇಕು. ಇಲ್ಲದಿದ್ದರೆ  ಕುದುರೆ ವ್ಯಾಪಾರ ನಡೆಯುವ ಸಾಧ್ಯತೆಗಳಿವೆ ಎಂದು  ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ರಾಜ್ಯಪಾಲ ಲಾಲ್‌ ಜೀ ಟಂಡನ್‌ ಅವರು ನಾಳೆಯೇ ವಿಶ್ವಾಸಮತ  ಸಾಬೀತು ಪಡಿಸುವಂತೆ ಕಮಲನಾಥ್ ಸರ್ಕಾರಕ್ಕೆ ಸೂಚಿಸಿದ್ದಾರೆ. ಇದಕ್ಕೂ ಮುನ್ನ ರಾಜ್ಯಪಾಲರು ಹಾಗೂ ಸ್ಪೀಕರ್ ಜಂಟಿಯಾಗಿ ಅಧಿವೇಶನದಲ್ಲಿ ಪಾಲ್ಗೊಂಡು ವಿಧಾನಸಭೆಯ ಕಲಾಪಗಳನ್ನು ಮಾರ್ಚ್ 26ಕ್ಕೆ ಮುಂದೂಡಿದ್ದರು.

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top