ನವದೆಹಲಿ: ಮಿದುಳಿನ ಶಸ್ತ್ರಚಿಕಿತ್ಸೆ ಒಳಗಾಗಿರುವ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ (84) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ವೆಂಟಿಲೇಟರ್ ನೆರವು ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿರುವ ಪ್ರಣವ್ ಮುಖರ್ಜಿ ಅವರು ಸೋಮವಾರ ಮಿದುಳು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದಕ್ಕೂ ಮುನ್ನ ಅವರಿಗೆ ಕೋವಿಡ್–19 ದೃಢಪಟ್ಟಿತ್ತು.
ಪ್ರಣವ್ ಅವರಿಗೆ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಶಸ್ತ್ರಚಿಕಿತ್ಸೆ ಮಾಡಲಾಯಿತು. ಶಸ್ತ್ರಚಿಕಿತ್ಸೆಗೂ ಪೂರ್ವದಲ್ಲೂ ಅವರಿಗೆ ವೆಂಟಿಲೇಟರ್ ನೆರವು ನೀಡಲಾಗಿತ್ತು ಎಂದು ವೈದ್ಯರು ತಿಳಸಿದ್ದಾರೆ.



