ನವದೆಹಲಿ: ಸಮಾಜವಾದಿ ಪಕ್ಷದ ಮಾಜಿ ನಾಯಕ, ರಾಜ್ಯಸಭಾ ಸದಸ್ಯ ಅಮರ್ ಸಿಂಗ್ (64) ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸಿಂಗಪುರದ ಆಸ್ಪತ್ರೆಯಲ್ಲಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.
2013ರಲ್ಲಿ ಕಿಡ್ನಿ ವೈಫಲ್ಯ ಉಂಟಾಗಿತ್ತು. ಬಳಿಕ ರಾಜಕೀಯದಿಂದ ದೂರವುಳಿದಿದ್ದ ಅವರು 2016ರಲ್ಲಿ ಮತ್ತೆ ರಾಜಕಾರಣಕ್ಕೆ ಮರಳಿದ್ದರು. ಪತ್ನಿ ಪಂಕಜಾ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಈ ವರ್ಷ ಮಾರ್ಚ್ನಲ್ಲಿ ಅಮರ್ ಸಿಂಗ್ ನಿಧನ ಎಂಬ ಸುದ್ದಿ ಹರಡಿತ್ತು.



