Connect with us

Dvg Suddi-Kannada News

ದೆಹಲಿ ಹಿಂಸಾಚಾರ ಪೂರ್ವ ನಿಯೋಜಿತ ಕೃತ್ಯ, ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಪ್ರಮುಖ ಸುದ್ದಿ

ದೆಹಲಿ ಹಿಂಸಾಚಾರ ಪೂರ್ವ ನಿಯೋಜಿತ ಕೃತ್ಯ, ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ನವದೆಹಲಿ: ದೆಹಲಿಯ ಹಿಂಸಾಚಾರ  ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಈ ಗಲಭೆ ನಿಯಂತ್ರಣ ತರಲು ರಾಜ್ಯ ಮತ್ತು ಕೇಂದ್ರ ಸರ್ಕಾರ ವೈಫಲ್ಯ ಎದ್ದು ಕಾಣುತ್ತಿದೆ .ಈ ಕೂಡಲೇ  ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಗ್ರಹಿಸಿದರು.

ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಅಶಾಂತಿ ಸೃಷ್ಟಿ ಮಾಡಲು ಬಿಜೆಪಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದೆ. ದೆಹಲಿಯ ಕೋಮು ಗಲಭೆ ನಿಯಂತ್ರಣಕ್ಕೆ ತರಲು ಕೇಂದ್ರ  ಮತ್ತು ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ.  ಗಲಭೆಯಲ್ಲಿ 20 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, ಗಲಭೆಯ ಹೊಣೆ ಹೊತ್ತು ಕೇಂದ್ರ ಗೃಹ ಸಚಿವ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

 ದೆಹಲಿಯ ಹಿಂಸಾಚಾರ ಮತ್ತು ದುರಂತ ಘಟನೆಗಳ ಹಿಂದೆ ಪಿತೂರಿಯಾಗಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್  ಶಾಂತಿ ಕಾಪಾಡುವಲ್ಲಿ ವಿಫಲರಾಗಿದ್ದಾರೆ.  ಹಿಂಸಾಚಾರವನ್ನು ಪ್ರಚೋದಿಸುವ ರೀತಿಯಲ್ಲಿ ಬಿಜೆಪಿ ನಾಯಕ ಕಪಿಲ್‌ ಮಿಶ್ರಾ ಹೇಳಿಕೆ ನೀಡುತ್ತಿದ್ದಾರೆ.  ದೆಹಲಿಯ ಪರಿಸ್ಥಿತಿ ಗಂಭೀರವಾಗಿದೆ. ಪರಿಸ್ಥಿತಿ ನಿಯಂತ್ರಿಸುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಬೇಕು ಹಾಗೂ ಮೊಹಲ್ಲಾಗಳಲ್ಲಿ ಶಾಂತಿ ಸಮಿತಿಗಳನ್ನು ರಚಿಸಬೇಕು. ದೆಹಲಿ ಮುಖ್ಯಮಂತ್ರಿಗಳು ಕೂಡಲೇ ಗಲಭೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ  ಅಲ್ಲಿನ ಜನರೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ಮನವಿ ಮಾಡಿದರು. ರಾಷ್ಟ್ರಪತಿ ಭವನದ ಮೆರವಣಿಗೆಯನ್ನು ಗುರುವಾರಕ್ಕೆ ಮುಂದೂಡಲಾಗಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಮಾಹಿತಿ ನೀಡಿದರು.

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top